ಪತ್ನಿಗಾಗಿ ಅಧಿಕಾರ ದುರುಪಯೋಗ: 15 ದಿನಕ್ಕೆ ಕಾರ್ಮಿಕ ಸಚಿವರನ್ನು ವಜಾಗೊಳಿಸಿದ ನೇಪಾಳ ಪ್ರಧಾನಿ!
ಆಡಳಿತಾರೂಢ ರಾಷ್ಟ್ರೀಯ ಸ್ವತಂತ್ರ ಪಕ್ಷ(RSP)ದ ಶಿಫಾರಸಿನ ಮೇರೆಗೆ ಕಾರ್ಮಿಕ, ಉದ್ಯೋಗ ಮತ್ತು ಸಾಮಾಜಿಕ ಭದ್ರತಾ ಸಚಿವ ದೀಪ್ ಕುಮಾರ್ ಶಾ ಅವರನ್ನು ಇಂದು ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಪ್ರಧಾನ ಮಂತ್ರಿಗಳ ಸಚಿವಾಲಯ ತಿಳಿಸಿದೆ.

ಕಠ್ಮಂಡು: ನೇಪಾಳ ಪ್ರಧಾನಿ ಬಾಲೇಂದ್ರ ಶಾ ಅವರು ಅಧಿಕಾರ ವಹಿಸಿಕೊಂಡ 15 ದಿನಗಳಲ್ಲೇ, ತಮ್ಮ ಪತ್ನಿಗೆ ಲಾಭ ಮಾಡಿಕೊಡಲು ಹುದ್ದೆಯನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ತಮ್ಮ ಕಾರ್ಮಿಕ ಸಚಿವರನ್ನು ಗುರುವಾರ ವಜಾಗೊಳಿಸಿದ್ದಾರೆ.
ಆಡಳಿತಾರೂಢ ರಾಷ್ಟ್ರೀಯ ಸ್ವತಂತ್ರ ಪಕ್ಷ(RSP)ದ ಶಿಫಾರಸಿನ ಮೇರೆಗೆ ಕಾರ್ಮಿಕ, ಉದ್ಯೋಗ ಮತ್ತು ಸಾಮಾಜಿಕ ಭದ್ರತಾ ಸಚಿವ ದೀಪ್ ಕುಮಾರ್ ಶಾ ಅವರನ್ನು ಇಂದು ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಪ್ರಧಾನ ಮಂತ್ರಿಗಳ ಸಚಿವಾಲಯ ತಿಳಿಸಿದೆ.
ತಮ್ಮ ಪತ್ನಿಯ ಅಧಿಕಾರಾವಧಿ ಮುಗಿದ ನಂತರ ಅವರನ್ನು ಆರೋಗ್ಯ ವಿಮಾ ಮಂಡಳಿಯ ಸದಸ್ಯರನ್ನಾಗಿ ಮರು ನೇಮಕ ಮಾಡಲು ತಮ್ಮ ಸಚಿವ ಸ್ಥಾನವನ್ನು ದುರುಪಯೋಗಪಡಿಸಿಕೊಂಡ ದೀಪ್ ಕುಮಾರ್ ಶಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಆರ್‌ಎಸ್‌ಪಿ ಅಧ್ಯಕ್ಷೆ ರಬಿ ಲಾಮಿಚಾನೆ ಅವರು ಪ್ರಧಾನಿಗೆ ಶಿಫಾರಸು ಮಾಡಿದ್ದರು.
ಪ್ರಧಾನಿ ಬಾಲೇಂದ್ರ ಶಾ ಅವರು ಈಗ ಕಾರ್ಮಿಕ ಸಚಿವಾಲಯದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



