ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!
ಈ ಸ್ವತ್ತುಗಳನ್ನು ಬಿಡುಗಡೆಗೊಳಿಸುವ ವಿಷಯದ ಬಗ್ಗೆ ಸದ್ಯ ಅಮೆರಿಕ ಯಾವುದೇ ಸಾರ್ವಜನಿಕ ಹೇಳಿಕೆಗಳನ್ನು ನೀಡಿಲ್ಲ.

ದುಬೈ: ಕತಾರ್ ಮತ್ತು ಇತರ ವಿದೇಶಿ ಬ್ಯಾಂಕುಗಳಲ್ಲಿ ತಡೆಹಿಡಿಯಲಾಗಿರುವ ಇರಾನ್‌ನ ಸ್ವತ್ತುಗಳನ್ನು ಬಿಡುಗಡೆ ಮಾಡಲು ಅಮೆರಿಕ ಒಪ್ಪಿಕೊಂಡಿದೆ ಎಂದು ಇರಾನಿನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಸ್ಲಾಮಾಬಾದ್‌ನಲ್ಲಿ ನಡೆಯುವ ಮಾತುಕತೆಯ ಸಮಯದಲ್ಲಿ ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಳ್ಳುವ ನಿಟ್ಟಿನಲ್ಲಿ ಇರಾನ್ ಇದನ್ನು ಸಕಾರಾತ್ಮಕ ಮತ್ತು ಗಂಭೀರ ಹೆಜ್ಜೆಯಾಗಿ ನೋಡುತ್ತದೆ ಎನ್ನಲಾಗಿದೆ.
ಈ ಆಸ್ತಿಗಳನ್ನು ಬಿಡುಗಡೆಗೊಳಿಸುವ ವಿಷಯದ ಬಗ್ಗೆ ಸದ್ಯ ಅಮೆರಿಕ ಯಾವುದೇ ಸಾರ್ವಜನಿಕ ಹೇಳಿಕೆಗಳನ್ನು ನೀಡಿಲ್ಲ.
ಇದು ಸೂಕ್ಷ್ಮ ವಿಚಾರವಾಗಿರುವುದರಿಂದ ಹೆಸರು ಬಹಿರಂಗಪಡಿಸಲು ನಿರಾಕರಿಸಿದ ಮೂಲಗಳು, ಇರಾನ್‌ನ ಈ ಸ್ವತ್ತುಗಳನ್ನು ಬಿಡುಗಡೆಗೊಳಿಸುವುದು 'ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತ ಸಂಚಾರವನ್ನು ಖಚಿತಪಡಿಸಿಕೊಳ್ಳುವುದಕ್ಕೆ ನೇರ ಸಂಬಂಧ ಹೊಂದಿದೆ' ಎಂದು ರಾಯಿಟರ್ಸ್‌ಗೆ ತಿಳಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿನ ಮಾತುಕತೆಯಲ್ಲಿ ಇದು ಪ್ರಮುಖ ವಿಷಯವಾಗುವ ನಿರೀಕ್ಷೆಯಿದೆ.
ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷಕ್ಕೆ ಕೊನೆಹಾಡುವ ನಿಟ್ಟಿನಲ್ಲಿ ಇರಾನ್ ಮತ್ತು ಅಮೆರಿಕ ಶಾಂತಿ ಮಾತುಕತೆ ನಡೆಸಲು ಒಪ್ಪಿಗೆ ಸೂಚಿಸಿದ್ದು, ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಶನಿವಾರ ಉಭಯ ದೇಶಗಳ ಸಭೆ ನಡೆಯಲಿದೆ.
ಏಪ್ರಿಲ್ 7ರಂದು ಎರಡು ವಾರಗಳ ಕದನ ವಿರಾಮಕ್ಕೆ ಎರಡೂ ದೇಶಗಳು ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಮಾತುಕತೆಗೆ ಮುಂದಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




