ಹಾರ್ಮುಜ್, ಲೆಬನಾನ್ ಕುರಿತು ಇಸ್ರೇಲ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಚರ್ಚೆ; ಇರಾನ್ನಿಂದ ಆರ್ಥಿಕ ಭಯೋತ್ಪಾದನೆ ಎಂದ ಸಾರ್!
ಹಾರ್ಮುಜ್ ಜಲಸಂಧಿಯಲ್ಲಿ ಆರ್ಥಿಕ ಭಯೋತ್ಪಾದನೆಯ ಮೂಲಕ ಇರಾನ್, ಹಡಗುಗಳ ಸಂಚಾರ ಸ್ವಾತಂತ್ರ್ಯಕ್ಕೆ ಹಾನಿ ಉಂಟು ಮಾಡುತ್ತಿದೆ.

ಟೆಲ್ ಅವಿವ್: ಇಸ್ರೇಲ್ ವಿದೇಶಾಂಗ ಸಚಿವ ಗಿಡಿಯಾನ್ ಸಾರ್ ಅವರು ಮಂಗಳವಾರ ಇರಾನ್, ಹಾರ್ಮುಜ್ ಜಲಸಂಧಿ ಮತ್ತು ಲೆಬನಾನ್ ಕುರಿತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಚರ್ಚಿಸಿದರು.
ಹಾರ್ಮುಜ್ ಜಲಸಂಧಿಯಲ್ಲಿ ಆರ್ಥಿಕ ಭಯೋತ್ಪಾದನೆಯ ಮೂಲಕ ಇರಾನ್, ಹಡಗುಗಳ ಸಂಚಾರ ಸ್ವಾತಂತ್ರ್ಯಕ್ಕೆ ಹಾನಿ ಉಂಟು ಮಾಡುತ್ತಿದೆ. ಹೀಗಾಗಿ ಭಾರತ ಸೇರಿದಂತೆ ಎಲ್ಲಾ ದೇಶಗಳಿಗೆ ಸಂಚಾರ ಸ್ವಾತಂತ್ರ್ಯವನ್ನು ಖಚಿತಪಡಿಸಿಕೊಳ್ಳುವ ಕ್ರಮದ ಅಗತ್ಯವಿದೆ ಎಂದು ಸಾರ್ ಹೇಳಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಸಾರ್, "ನನ್ನ ಸ್ನೇಹಿತ, ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಯಾವಾಗಲೂ ಉತ್ತಮ ಸಂಭಾಷಣೆ ನಡೆಸಿದೆ. ನಾವು ಇಬ್ಬರೂ ಇರಾನ್, ಹಾರ್ಮುಜ್ ಜಲಸಂಧಿ ಮತ್ತು ಲೆಬನಾನ್ ಬಗ್ಗೆ ಚರ್ಚಿಸಿದ್ದೇವೆ ಎಂದು ಹೇಳಿದ್ದಾರೆ.
ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದುವುದನ್ನು ತಡೆಯುವ ಪರಿಸ್ಥಿತಿಗಳ ಕುರಿತು ಚರ್ಚಿಸಿದ್ದೇವೆ. ಇಡೀ ಅಂತರರಾಷ್ಟ್ರೀಯ ಸಮುದಾಯಕ್ಕೆ ಇದು ನಿರ್ಣಾಯಕವಾಗಿದೆ ಎಂದು ನಾನು ಹೇಳಿದೆ" ಎಂದು ಸಾರ್ ತಿಳಿಸಿದ್ದಾರೆ.
"ಹಾರ್ಮುಜ್ ಜಲಸಂಧಿಯಲ್ಲಿ ಆರ್ಥಿಕ ಭಯೋತ್ಪಾದನೆಯ ಮೂಲಕ ಇರಾನ್ ಹಡಗುಗಳ ಸಂಚಾರ ಸ್ವಾತಂತ್ರ್ಯಕ್ಕೆ ಮತ್ತು ಜಾಗತಿಕ ಆರ್ಥಿಕತೆಗೆ ಹಾನಿ ಉಂಟು ಮಾಡುವುದರಿಂದ ಭಾರತ ಮತ್ತು ಕೊಲ್ಲಿಯಲ್ಲಿರುವ ನಮ್ಮ ಸ್ನೇಹಿತರು ಸೇರಿದಂತೆ ಎಲ್ಲಾ ದೇಶಗಳಿಗೆ ಸಂಚಾರ ಸ್ವಾತಂತ್ರ್ಯವನ್ನು ಖಚಿತಪಡಿಸುವ ಕ್ರಮದ ಅಗತ್ಯವಿದೆ ಎಂದು ನಾನು ಹೇಳಿದ್ದೇನೆ" ಎಂದು ಸಾರ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಜೈಶಂಕರ್ ಅವರು ಯುಎಇಗೆ ತಮ್ಮ ಅಧಿಕೃತ ಭೇಟಿಯ ನಂತರ ಸಾರ್ ಅವರು ಈ ಪೋಸ್ಟ್ ಹಾಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



