ಇರಾನ್ ಜೊತೆಗೆ ಶಾಂತಿ ಒಪ್ಪಂದ ಯಶಸ್ವಿಯಾದರೆ ಪಾಕಿಸ್ತಾನಕ್ಕೆ ಭೇಟಿ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಶಾಂತಿ ಒಪ್ಪಂದ ಅಂತಿಮವಾದಲ್ಲಿ, ಒಪ್ಪಂದಕ್ಕೆ ಸಹಿ ಹಾಕಲು ಪಾಕಿಸ್ತಾನಕ್ಕೆ ಭೇಟಿ ನೀಡುವ ಕುರಿತು ಚಿಂತನೆ ನಡೆಸಲಾಗುವುದು.

ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದ ಅಂತಿಮಗೊಂಡರೆ, ಪಾಕಿಸ್ತಾನಕ್ಕೆ ಭೇಟಿ ನೀಡುವ ಬಗ್ಗೆ ಚಿಂತೆ ನಡೆಸಲಾಗುವುದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ.
ನೆವಾಡಾ ಮತ್ತು ಅರಿಜೋನಾ ಪ್ರವಾಸಕ್ಕೆ ತೆರಳುವ ಮುನ್ನ ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇರಾನ್ ಜೊತೆಗಿನ ಮಾತುಕತೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಒಪ್ಪಂದಕ್ಕೆ ಬರಬಹುದು ಎಂದು ಹೇಳಿದ್ದಾರೆ.
‘ಶಾಂತಿ ಒಪ್ಪಂದ ಅಂತಿಮವಾದಲ್ಲಿ, ಒಪ್ಪಂದಕ್ಕೆ ಸಹಿ ಹಾಕಲು ಪಾಕಿಸ್ತಾನಕ್ಕೆ ಭೇಟಿ ನೀಡುವ ಕುರಿತು ಚಿಂತನೆ ನಡೆಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ, ಅಮೆರಿಕ-ಇರಾನ್ ಮಾತುಕತೆಯಲ್ಲಿ ಸಂಧಾನಕಾರರಾಗಿ ಪ್ರಮುಖ ಪಾತ್ರ ವಹಿಸುತ್ತಿರುವ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಂ ಮುನೀರ್ ಅವರನ್ನೂ ಟ್ರಂಪ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
‘ಅಲ್ಲಿನ ಫೀಲ್ಡ್ ಮಾರ್ಷಲ್(ಅಸಿಂ ಮುನೀರ್) ಅದ್ಭುತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಾಕಿಸ್ತಾನದ ಪ್ರಧಾನಿಯವರು ಕೂಡ ನಿಜಕ್ಕೂ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಹೀಗಾಗಿ ನಾನು ಅಲ್ಲಿಗೆ ಹೋಗಬಹುದು. ಅವರು ನನ್ನ ಉಪಸ್ಥಿತಿಯನ್ನು ಬಯಸುತ್ತಿದ್ದಾರೆ’ ಎಂದು ತಿಳಿಸಿದರು.
ಈ ನಡುವೆ ಲಾಸ್ವೇಗಾಸ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಂಪ್, ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಪಡೆಯದಂತೆ ತಡೆಯುವುದು ಮಾತುಕತೆಯ ಕೇಂದ್ರ ಉದ್ದೇಶವಾಗಿದೆ ಎಂದು ಪುನರುಚ್ಚರಿಸಿದರು.
‘ನಾವು ಮಾಡಬೇಕಾದ ಮುಖ್ಯ ಕೆಲಸವೆಂದರೆ ಇರಾನ್ ಯಾವುದೇ ಕಾರಣಕ್ಕೂ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದದಂತೆ ನೋಡಿಕೊಳ್ಳುವುದು. ಇದು ಅತ್ಯಂತ ಮುಖ್ಯವಾಗಿದೆ ಮತ್ತು ಇರಾನ್ ಸಹ ಇದಕ್ಕೆ ಒಪ್ಪಿಕೊಂಡಿದೆ’ ಎಂದರು.
‘ಒಂದು ವೇಳೆ ಮಾತುಕತೆ ಯಶಸ್ವಿಯಾದರೆ, ಶೀಘ್ರದಲ್ಲೇ ಅಧಿಕೃತ ಘೋಷಣೆ ಹೋರಬೀಳುತ್ತದೆ. ಇದರಿಂದ ತೈಲ ಬೆಲೆಗಳು ಇಳಿಕೆಯಾಗಬಹುದು ಮತ್ತು ಪ್ರಮುಖ ಹಡಗು ಸಾಗಣೆ ಮಾರ್ಗಗಳಲ್ಲಿ ಸ್ಥಿರತೆ ಸುಧಾರಿಸಬಹುದು’ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



