ವಿದೇಶ

ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ: ಸಮುದ್ರದಲ್ಲಿ ಅಲೆಗಳ ಅಬ್ಬರ; ಸುನಾಮಿ ಎಚ್ಚರಿಕೆ

ಭೂಕಂಪದ ಪರಿಣಾಮ ಇವಾಟೆ ಪ್ರಿಫೆಕ್ಚರ್‌ನ ಕುಜಿ ಬಂದರಿನಲ್ಲಿ 80 ಸೆಂ.ಮೀ. ಸುನಾಮಿ ಸಂಭವಿಸಿದೆ ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ.

ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ: ಸಮುದ್ರದಲ್ಲಿ ಅಲೆಗಳ ಅಬ್ಬರ; ಸುನಾಮಿ ಎಚ್ಚರಿಕೆ
ಸಾಂದರ್ಭಿಕ ಚಿತ್ರ
Published On :

ಟೊಕಿಯೋ: ಜಪಾನ್‌ನ ಈಶಾನ್ಯ ಮತ್ತು ಉತ್ತರ ಭಾಗದಲ್ಲಿ ಸೋಮವಾರ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ.

ಭೂಕಂಪದ ಪರಿಣಾಮ ಇವಾಟೆ ಪ್ರಿಫೆಕ್ಚರ್‌ನ ಕುಜಿ ಬಂದರಿನಲ್ಲಿ 80 ಸೆಂ.ಮೀ. ಸುನಾಮಿ ಸಂಭವಿಸಿದೆ ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ.

ಸ್ಥಳೀಯ ಕಾಲಮಾನ ಸಂಜೆ 4:53ರ ವೇಳೆಗೆ ಈಶಾನ್ಯ ಕರಾವಳಿ ಭಾಗದಲ್ಲಿ 7.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಇದರಿಂದಾಗಿ ಈ ಪ್ರದೇಶದಿಂದ ಸುಮಾರು ನೂರಾರು ಕಿ.ಮೀ ದೂರದಲ್ಲಿರುವ ಟೊಕಿಯೋ ನಗರದ ಬೃಹತ್‌ ಕಟ್ಟಡಗಳು ಅಲುಗಾಡಿವೆ. ಇದು ಸುನಾಮಿ ಅಪ್ಪಳಿಸುವ ಸಾಧ್ಯತೆಯನ್ನು ಹೆಚ್ಚಿಸಿದೆ ಎಂದು ಎಚ್ಚರಿಕೆ ನೀಡಿದೆ.

ಕಂಪನದ ನಂತರ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು, ಇವಾಟೆ, ಅಮೋರಿ ಮತ್ತು ಹೊಕ್ಕೈಡೋ ಪ್ರಾಂತ್ಯಗಳ ಕೆಲವು ಕರಾವಳಿ ಭಾಗಗಳಿಗೆ ಮೂರು ಮೀಟರ್ (10 ಅಡಿ) ಎತ್ತರದ ಸುನಾಮಿ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಕರಾವಳಿ ಮತ್ತು ನದಿ ತೀರ ಪ್ರದೇಶಗಳಲ್ಲಿರುವ ಜನರು ತಕ್ಷಣವೇ ಎತ್ತರದ ಪ್ರದೇಶಗಳಿಗೆ ಅಥವಾ ಭದ್ರವಾದ ಕಟ್ಟಡಗಳಿಗೆ ಸ್ಥಳಾಂತರಗೊಳ್ಳಬೇಕೆಂದು ಸಂಸ್ಥೆ ವಿನಂತಿಸಿದೆ. ಸುನಾಮಿ ಅಲೆಗಳು ಒಂದೇ ಬಾರಿ ಅಲ್ಲ, ಪದೇ ಪದೇ ಬರಬಹುದಾದ್ದರಿಂದ ಎಚ್ಚರಿಕೆಯನ್ನು ಹಿಂತೆಗೆದುಕೊಳ್ಳುವವರೆಗೆ ಸುರಕ್ಷಿತ ಸ್ಥಳವನ್ನು ಬಿಡಬಾರದು ಎಂದು ಕೂಡ ಎಚ್ಚರಿಸಲಾಗಿದೆ.

ಮುಂದಿನ ವಾರವೂ ಇದೇ ರೀತಿಯ ಪ್ರಬಲ ಭೂಕಂಪಗಳು ಸಂಭವಿಸಬಹುದು ಎಂದು ಜಪಾನ್ ಹವಾಮಾನ ಸಂಸ್ಥೆ ಎಚ್ಚರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.