ಹಾರ್ಮುಜ್ ಜಲಸಂಧಿಯಲ್ಲಿ ಮತ್ತೊಂದು ಹಡಗಿನ ಮೇಲೆ ಇರಾನ್ ಗುಂಡಿನ ದಾಳಿ; ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ!
ಇಂದು ಬೆಳಗ್ಗೆ ಅಮೆರಿಕಾ ಕದನ ವಿರಾಮ ವಿಸ್ತರಿಸುವುದಾಗಿ ಘೋಷಿಸಿದ ಬೆನ್ನಲ್ಲೇ, ಹಾರ್ಮುಜ್ ಮೂಲಕ ಸಾಗುತ್ತಿದ್ದ ಕಂಟೇನರ್ ಹಡಗಿನ ಮೇಲೆ ಇರಾನ್ ದಾಳಿ ನಡೆಸಿದೆ.

ಟೆಹ್ರಾನ್: ಬ್ರಿಟಿಷ್ ಮಿಲಿಟರಿಯ ಪ್ರಕಾರ, ಹಾರ್ಮುಜ್ ಜಲಸಂಧಿಯಲ್ಲಿ ಬುಧವಾರ ಒಟ್ಟು ಎರಡು ಹಡಗುಗಳ ಮೇಲೆ ಗುಂಡಿನ ದಾಳಿ ನಡೆಸಲಾದ್ದು, ಇದು ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಅಲ್ಲದೆ ಸಂಘರ್ಷವನ್ನು ಕೊನೆಗೊಳಿಸಲು ಪಾಕಿಸ್ತಾನದಲ್ಲಿ ಶಾಂತಿ ಮಾತುಕತೆಗಾಗಿ ಅಮೆರಿಕ ಮತ್ತು ಇರಾನ್ ಅನ್ನು ಒಟ್ಟುಗೂಡಿಸುವ ಪ್ರಯತ್ನಗಳಿಗೆ ಹಿನ್ನಡೆಯಾಗಿದೆ.
ಇಂದು ಬೆಳಗ್ಗೆ ಅಮೆರಿಕಾ ಕದನ ವಿರಾಮ ವಿಸ್ತರಿಸುವುದಾಗಿ ಘೋಷಿಸಿದ ಬೆನ್ನಲ್ಲೇ, ಹಾರ್ಮುಜ್ ಮೂಲಕ ಸಾಗುತ್ತಿದ್ದ ಕಂಟೇನರ್ ಹಡಗಿನ ಮೇಲೆ ಇರಾನ್ ದಾಳಿ ನಡೆಸಿದೆ.
ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್(IRGC) ಪಡೆ ಈ ದಾಳಿ ನಡೆಸಿದ್ದು, ಹಡಗಿನ ಹತ್ತಿರ ಬಂದು ಗುಂಡಿನ ದಾಳಿ ನಡೆಸಿದ್ದು, ಹಡಗಿನ ನಿಯಂತ್ರಣ ಕೊಠಡಿಗೆ(ಕಂಟ್ರೋಲ್ ರೂಂ) ದೊಡ್ಡ ಮಟ್ಟದ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಆದರೆ ಯಾವುದೇ ಸಿಬ್ಬಂದಿಗೆ ಗಾಯಗಳಾಗಿಲ್ಲ.
ಬ್ರಿಟಿಷ್ ಮಿಲಿಟರಿ ನಡೆಸುತ್ತಿರುವ ಯುನೈಟೆಡ್ ಕಿಂಗ್‌ಡಮ್ ಮ್ಯಾರಿಟೈಮ್ ಟ್ರೇಡ್ ಆಪರೇಷನ್ಸ್ ಸೆಂಟರ್, ಎರಡನೇ ಗುಂಡಿನ ದಾಳಿಗೆ ಯಾರು ಕಾರಣ ಎಂದು ತಕ್ಷಣವೇ ಗುರುತಿಸಲು ಸಾಧ್ಯವಾಗಿಲ್ಲ. ಆದರೆ ಇರಾನ್ ಈ ದಾಳಿ ನಡೆಸಿರಬಹುದು ಎಂದು ಶಂಕಿಸಲಾಗಿದೆ.
ಎರಡನೇ ಪ್ರಕರಣದಲ್ಲಿ, ಒಂದು ಸರಕು ಹಡಗು ಗುಂಡಿನ ದಾಳಿಗೆ ತುತ್ತಾಗಿದ್ದು, ನಿಲ್ಲಿಸುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ. ಆದರೆ ದಾಳಿಯಲ್ಲಿ ಯಾವುದೇ ಹಾನಿಯಾಗಿಲ್ಲ.
ಅಮೆರಿಕಾ ಇತ್ತೀಚೆಗೆ ಇರಾನ್‌ಗೆ ಸಂಬಂಧಿಸಿದ ಹಡಗುಗಳನ್ನು ವಶಪಡಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಪ್ರತೀಕಾರವಾಗಿ ಈ ದಾಳಿ ನಡೆದಿರಬಹುದು ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



