US-Iran war: ಮಾತುಕತೆ ಅನಿಶ್ಚಿತತೆ ನಡುವೆ ಕದನ ವಿರಾಮ ವಿಸ್ತರಣೆ; ಶಾಂತಿ ಪ್ರಕ್ರಿಯೆಗೆ ಮತ್ತೊಂದು ಅವಕಾಶ; ಟ್ರಂಪ್'ಗೆ ಧನ್ಯವಾದ ತಿಳಿಸಿದ ಪಾಕ್ ಪ್ರಧಾನಿ
ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಮುಂದಿನ ಹಂತದ ಮಾತುಕತೆಗಳು ಶಾಂತಿ ಒಪ್ಪಂದಕ್ಕೆ ದಾರಿ ಮಾಡಿಕೊಡಲಿ ಎಂಬ ಆಶಯವನ್ನೂ ವ್ಯಕ್ತಪಡಿಸಿದ್ದಾರೆ.

ತಮ್ಮ ಮನವಿಗೆ ಸ್ಪಂದಿಸಿ ಇರಾನ್ ಯುದ್ಧ ವಿರಾಮವನ್ನು ವಿಸ್ತರಿಸಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪಾಕಿಸ್ತಾನ ಪ್ರಧಾನಮಂತ್ರಿ ಶಹಬಾಜ್ ಷರೀಫ್ ಅವರು ಧನ್ಯವಾದ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ತಮ್ಮ ಹಾಗೂ ಫೀಲ್ಡ್ ಮಾರ್ಷಲ್ ಅಸೀಮ್ ಮುನೀರ್ ಪರವಾಗಿ ಟ್ರಂಪ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಸಮಯವನ್ನು ಬಳಸಿಕೊಂಡು ಶಾಂತಿ ಒಪ್ಪಂದದತ್ತ ಸಾಗಲು ಪ್ರಯತ್ನಿಸಲಾಗುತ್ತದೆ ಎಂದು ಹೇಳಿದ್ದಾರೆ.
ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಮುಂದಿನ ಹಂತದ ಮಾತುಕತೆಗಳು ಶಾಂತಿ ಒಪ್ಪಂದಕ್ಕೆ ದಾರಿ ಮಾಡಿಕೊಡಲಿ ಎಂಬ ಆಶಯವನ್ನೂ ವ್ಯಕ್ತಪಡಿಸಿದ್ದಾರೆ.
ಇದಕ್ಕೂ ಮುನ್ನ ಡೊನಾಲ್ಡ್ ಟ್ರಂಪ್ ಅವರು ಕದನ ವಿರಾಮವನ್ನು ಪಾಕಿಸ್ತಾನದ ಮನವಿಯ ಮೇರೆಗೆ ವಿಸ್ತರಿಸಿದ್ದಾಗಿ ಸ್ಪಷ್ಟಪಡಿಸಿದ್ದು, ಇರಾನ್ ಸರ್ಕಾರದಿಂದ ಏಕೀಕೃತ ಪ್ರಸ್ತಾವನೆಗಾಗಿ ಕಾಯುತ್ತಿರುವುದಾಗಿ ಹೇಳಿದ್ದಾರೆ. ಇದೇ ವೇಳೆ ಹಾರ್ಮುಜ್ ಜಲಸಂಧಿಯಲ್ಲಿ ನೌಕಾ ದಿಕ್ಬಂಧನ ಮುಂದುವರೆಸುವುದಾಗಿ ತಿಳಿಸಿದ್ದಾರೆ.
ಈ ನಡುವೆ ಅಮೆರಿಕಾ ಉಪಾಧ್ಯಕ್ಷ ಜೆಡಿ ವೆನ್ಸ್ ನೇತೃತ್ವದಲ್ಲಿ ಇಸ್ಲಾಮಾಬಾದ್‌ನಲ್ಲಿ ನಡೆಯಬೇಕಿದ್ದ ಶಾಂತಿ ಮಾತುಕತೆಗಳು ಭೇಟಿ ತಾತ್ಕಾಲಿಕವಾಗಿ ರದ್ದುಗೊಂಡಿದೆ. ಈ ಮಾತುಕತೆಗಳನ್ನು ಮರುನಿಗದಿಪಡಿಸುವ ಬಗ್ಗೆ ಇನ್ನೂ ಯಾವುದೇ ಸ್ಪಷ್ಟ ಮಾಹಿತಿಗಳು ಲಭ್ಯವಾಗಿಲ್ಲ.
ಇರಾನ್ ಕೂಡ ಮಾತುಕತೆಗಳಲ್ಲಿ ಭಾಗವಹಿಸುವುದಾಗಿ ದೃಢಪಡಿಸಿಲ್ಲ. ಫಲಿತಾಂಶದ ನಿರೀಕ್ಷೆ ಇದ್ದರೆ ಮಾತ್ರ ಮಾತುಕತೆಯಲ್ಲಿ ಭಾಗವಹಿಸುವುದಾಗಿ ಇರಾನ್ ವಿದೇಶಾಂಗ ಇಲಾಖೆ ಹೇಳಿದೆ. ಇತ್ತ ಪಾಕಿಸ್ತಾನ ಸುಮಾರು 10,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ ಮಾತುಕತೆಗಳಿಗೆ ಸಿದ್ಧತೆ ಮಾಡಿಕೊಂಡಿತ್ತು.
ಏಪ್ರಿಲ್ 11–12 ರಂದು ನಡೆದ ಮೊದಲ ಹಂತದ ಅಮೆರಿಕಾ-ಇರಾನ್ ಮಾತುಕತೆ ಫಲಕಾರಿಯಾಗದ ಹಿನ್ನೆಲೆಯಲ್ಲಿ, ಪಾಕಿಸ್ತಾನ ಶಾಂತಿ ಪ್ರಯತ್ನಗಳನ್ನು ಮುಂದುವರೆಸುವ ಪ್ರಸ್ತಾಪವನ್ನು ಟ್ರಂಪ್ ಮುಂದೆ ಇರಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


