ವಿದೇಶ

ಭಾರತಕ್ಕೆ ಬೇಕಿದ್ದ ಮತ್ತೊಬ್ಬ ಉಗ್ರನ ಬೇಟೆ: ಪಾಕಿಸ್ತಾನದಲ್ಲಿ ಜೈಶ್ ಸಂಘಟನೆಯ ಟಾಪ್ ಕಮಾಂಡರ್ ನಿಗೂಢ ಸಾವು!

ಪಾಕಿಸ್ತಾನದಲ್ಲಿ ಮತ್ತೊಬ್ಬ ಭಯೋತ್ಪಾದಕನ ಅನುಮಾನಾಸ್ಪದ ಸಾವಿನ ಸುದ್ದಿ ಹೊರಬಿದ್ದಿದೆ. ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಉನ್ನತ ಭಯೋತ್ಪಾದಕ ಕಮಾಂಡರ್ ಮೌಲಾನಾ ಸಲ್ಮಾನ್ ಅಜರ್ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.

ಭಾರತಕ್ಕೆ ಬೇಕಿದ್ದ ಮತ್ತೊಬ್ಬ ಉಗ್ರನ ಬೇಟೆ: ಪಾಕಿಸ್ತಾನದಲ್ಲಿ ಜೈಶ್ ಸಂಘಟನೆಯ ಟಾಪ್ ಕಮಾಂಡರ್ ನಿಗೂಢ ಸಾವು!
ಮೌಲಾನಾ ಸಲ್ಮಾನ್ ಅಜರ್ ಸಾವು
Published On :

ಪಾಕಿಸ್ತಾನದಲ್ಲಿ ಮತ್ತೊಬ್ಬ ಭಯೋತ್ಪಾದಕನ ಅನುಮಾನಾಸ್ಪದ ಸಾವಿನ ಸುದ್ದಿ ಹೊರಬಿದ್ದಿದೆ. ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಉನ್ನತ ಭಯೋತ್ಪಾದಕ ಕಮಾಂಡರ್ ಮೌಲಾನಾ ಸಲ್ಮಾನ್ ಅಜರ್ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಭಾರತದ ವಿರುದ್ಧ ಸಂಚು ರೂಪಿಸುತ್ತಿದ್ದ ಜೈಶ್-ಎ-ಮೊಹಮ್ಮದ್ ನ ಪ್ರಮುಖ ಕಮಾಂಡರ್ ಸಾವು, ಭಯೋತ್ಪಾದಕ ಸಂಘಟನೆಗೆ ದೊಡ್ಡ ಹೊಡೆತವಾಗಬಹುದು. ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ.

ಭಾರತದ ನೆರೆಯ ರಾಷ್ಟ್ರ ಪಾಕಿಸ್ತಾನವು ಬಹಳ ಹಿಂದಿನಿಂದಲೂ ಭಯೋತ್ಪಾದಕ ಸಂಘಟನೆಗಳಿಗೆ ಸುರಕ್ಷಿತ ತಾಣವಾಗಿದೆ. ಪಾಕಿಸ್ತಾನವು ಭಾರತ ಮತ್ತು ಪ್ರಪಂಚದಾದ್ಯಂತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಿಗೆ ನೆಲೆಯಾಗಿದೆ. ಆದಾಗ್ಯೂ, ಕೆಲವು ಸಮಯದಿಂದ, ಭಯೋತ್ಪಾದಕರು ಪಾಕಿಸ್ತಾನದಲ್ಲಿ ಭಯದಿಂದ ಬದುಕುತ್ತಿದ್ದಾರೆ. ಅಪರಿಚಿತರ ಟಾರ್ಗೆಟ್ ದಾಳಿಯಿಂದಾಗಿ ಭಯೋತ್ಪಾದಕರು ಆತಂಕದಲ್ಲೇ ಬದುಕುತ್ತಿದ್ದಾರೆ. ಪಾಕಿಸ್ತಾನದಲ್ಲಿ ಭಯೋತ್ಪಾದಕರು ಒಬ್ಬರ ನಂತರ ಒಬ್ಬರಂತೆ ಹತ್ಯೆಗೀಡಾಗುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.