ಇಂಡೋನೇಷ್ಯಾ: 271 ಪ್ರಯಾಣಿಕರಿದ್ದ ಫೆರ್ರಿಯಲ್ಲಿ ಹಠಾತ್ ಬೆಂಕಿ; ಕನಿಷ್ಠ 5 ಸಾವು, 41 ಪ್ರಯಾಣಿಕರು ನಾಪತ್ತೆ
ಇಂಡೋನೇಷ್ಯಾದ ಮಧುರಾ ದ್ವೀಪದ ಸಮುದ್ರ ತೀರದ ಬಳಿ ಸಂಭವಿಸಿದ ಭೀಕರ ಫೆರ್ರಿ ಅಗ್ನಿ ಅವಘಡದಲ್ಲಿ ಐವರು ದಾರುಣವಾಗಿ ಮೃತಪಟ್ಟು, 41 ಜನರು ನಾಪತ್ತೆಯಾಗಿರುವ ಆಘಾತಕಾರಿ ಘಟನೆ ವರದಿಯಾಗಿದೆ.

ಮಧುರಾ (ಇಂಡೋನೇಷ್ಯಾ): ಇಂಡೋನೇಷ್ಯಾದ ಮಧುರಾ ದ್ವೀಪದ ಕರಾವಳಿಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ಫೆರ್ರಿ (ಹಡಗು) ಅಗ್ನಿ ಅವಘಡದಲ್ಲಿ ಕನಿಷ್ಠ 5 ಜನರು ಸಾವನ್ನಪ್ಪಿದ್ದಾರೆ ಮತ್ತು 41 ಜನರು ನಾಪತ್ತೆಯಾಗಿದ್ದಾರೆ. ಇನ್ನು ಆ ಹಡಗಿನಲ್ಲಿ ಕನಿಷ್ಠ 271 ಜನರಿದ್ದರು ಎನ್ನಲಾಗಿದೆ. ಆ ಕುರಿತ ವರದಿ ಇಲ್ಲಿದೆ:
ಏನಿದು ಘಟನೆ?
ಇಂಡೋನೇಷ್ಯಾದ ಮಧುರಾ ದ್ವೀಪದ ಬಳಿ, ಸುರಬಯಾದಿಂದ ಮಕಾಸ್ಸರ್‌ಗೆ ಪ್ರಯಾಣಿಸುತ್ತಿದ್ದ ಹಡಗಿನಲ್ಲಿ (ಫೆರ್ರಿ) ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ಈ ವೇಳೆ ಹಡಗಿನಲ್ಲಿ ಸಿಬ್ಬಂದಿ ಸೇರಿ ಒಟ್ಟು 271 ಜನರಿದ್ದರು. ಅವರಲ್ಲಿ 225 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಇನ್ನು 5 ಜನರು ಸಾವನ್ನಪಿದ್ದು, 41 ಜನರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಇನ್ನು ಮೃತರಲ್ಲಿ ಒಬ್ಬ ಗರ್ಭಿಣಿ ಮಹಿಳೆಯೂ ಸೇರಿದ್ದಾರೆ ಎನ್ನಲಾಗಿದ್ದು, ನಾಪತ್ತೆಯಾದವರಿಗಾಗಿ ರಕ್ಷಣಾ ಕಾರ್ಯ ಮುನುವರೆದಿದೆ.
ಮುಂದುವರೆದು, ಹಡಗಿನ ಮೇಲ್ಭಾಗದ ಡೆಕ್‌ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಪ್ರಾಣ ಉಳಿಸಿಕೊಳ್ಳಲು ಸಮುದ್ರಕ್ಕೆ ಜಿಗಿದಿದ್ದಾರೆ. ಆದರೆ, ಬೆಂಕಿ ಕಾಣಿಸಿಕೊಳ್ಳಲು ನಿಖರವಾದ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ.
ಏತನ್ಮಧ್ಯೆ, ಇಂಡೋನೇಷ್ಯಾದಲ್ಲಿ 17,000 ಕ್ಕೂ ಹೆಚ್ಚು ದ್ವೀಪಗಳಿರುವುದರಿಂದ ಸಂಚಾರಕ್ಕೆ ಹಡಗುಗಳನ್ನೇ ಹೆಚ್ಚಾಗಿ ಅವಲಂಬಿಸಲಾಗಿದೆ. ಆದರೆ ಕಳಪೆ ಸುರಕ್ಷತಾ ನಿಯಮಗಳಿಂದಾಗಿ ಇಲ್ಲಿ ಇಂತಹ ಅಪಘಾತಗಳು ಪದೇ ಪದೇ ಸಂಭವಿಸುತ್ತಿರುತ್ತವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



