ಶಾಲೆಯಲ್ಲಿ ಗುಂಡಿನ ದಾಳಿ; ಶಿಕ್ಷಕ ಸೇರಿದಂತೆ 6 ಜನರು ಸಾವು
ಥೈಲ್ಯಾಂಡ್‌ನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ ಪರಿಣಾಮ ಶಿಕ್ಷಕ ಸೇರಿದಂತೆ ಒಟ್ಟು 6 ಜನರು ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಬ್ಯಾಂಕಾಕ್ (ಥೈಲ್ಯಾಂಡ್): ಥೈಲ್ಯಾಂಡ್‌ನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ ಪರಿಣಾಮ ಶಿಕ್ಷಕ ಸೇರಿದಂತೆ ಒಟ್ಟು 6 ಜನರು ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಏನಿದು ಘಟನೆ?
ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್ ಬಳಿಯ ನೊಂಥಬುರಿಯ ಬ್ಯಾಂಗ್ ಕ್ರುವಾಯಿ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ್ದು, ಇದರ ಪರಿಣಾಮ ಶಿಕ್ಷಕ ಸೇರಿದಂತೆ ಒಟ್ಟು 6 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಜನ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು, ದಾಳಿಕೋರನನ್ನು ಅದೇ ಶಾಲೆಯ ವಿದ್ಯಾರ್ಥಿಯಾಗಿದ್ದ ಎನ್ನಲಾಗಿದ್ದು, ದಾಳಿಯ ನಂತರ ತನ್ನನ್ನು ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತಾತನ ಪಿಸ್ತೂಲ್‌ನಿಂದಲೇ ತಾತ-ಅಜ್ಜಿಯ ಕೊಲೆ
9ನೇ ತರಗತಿಯ ಈ ಅಪ್ರಾಪ್ತ ವಿದ್ಯಾರ್ಥಿಯು ತಾತನಿಗೆ ಸೇರಿದ 9mm ಪಿಸ್ತೂಲ್ ಹಿಡಿದು ಶಾಲೆಗೆ ಬಂದಿದ್ದು, ಶಿಕ್ಷಕರು ಮತ್ತು ಸಹಪಾಠಿಗಳ ಮೇಲೆ ಏಕಾಏಕಿ ಗುಂಡಿನ ದಾಳಿ ಆರಂಭಿಸಿದ್ದಾನೆ. ಘಟನೆಯಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಇದಕ್ಕೂ ಮುನ್ನ, ಶಾಲೆಗೆ ಬರುವ ಮುನ್ನವೇ, ಆ ಅಪ್ರಾಪ್ತ ವಿದ್ಯಾರ್ಥಿಯು ಮನೆಯಲ್ಲಿದ್ದ ತಾತ ಮತ್ತು ಅಜ್ಜಿಯನ್ನು ಗುಂಡಿಕ್ಕಿ ಕೊಂದಿದ್ದ ಎನ್ನಲಾಗಿದೆ. ಏತನ್ಮಧ್ಯೆ, ಈ ಗುಂಡಿನ ದಾಳಿಯ ಹಿಂದಿನ ಉದ್ದೇಶವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇನ್ನು ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಧಾನಿ ಅನುತಿನ್ ಚರ್ನ್ವಿರಕುಲ್, "ಇದು ತುಂಬಾ ಭಯಾನಕ ಘಟನೆ. ಇದು ಎಂದಿಗೂ ಸಂಭವಿಸಬಾರದಿತ್ತು. ನಮ್ಮ ದೇಶದಲ್ಲಿ ಇದು ಹೇಗೆ ಸಂಭವಿಸಲು ಸಾಧ್ಯ?" ಎಂದು ಹೇಳಿದ್ದಾರೆ.
ಇಂತಹ ಘಟನೆಗಳು ಈ ಹಿಂದೆಯೂ ನಡೆದಿವೆ..
ಇದೇ ವರ್ಷ ಫೆಬ್ರವರಿಯಲ್ಲಿ ದಕ್ಷಿಣ ಥೈಲ್ಯಾಂಡ್‌ನ ಹಾತ್ ಯೈ ಜಿಲ್ಲೆಯ ಶಾಲೆಯೊಂದರಲ್ಲಿ 18 ವರ್ಷದ ಯುವಕನೊಬ್ಬ ಪೊಲೀಸ್ ಅಧಿಕಾರಿಯ ಗನ್ ಕದ್ದು ಶಾಲೆಯೊಳಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದನು. ಈ ಘಟನೆಯಲ್ಲಿ ಶಾಲೆಯ ಪ್ರಾಂಶುಪಾಲರು ಮೃತಪಟ್ಟು, ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಅದಕ್ಕೂ ಮುನ್ನ ಕೆಲಸದಿಂದ ವಜಾಗೊಂಡಿದ್ದ ಮಾಜಿ ಪೊಲೀಸ್ ಅಧಿಕಾರಿಯೊಬ್ಬ ಮಕ್ಕಳ ಡೇ-ಕೇರ್ ಸೆಂಟರ್‌ಗೆ ನುಗ್ಗಿ ಗನ್ ಮತ್ತು ಚಾಕುವಿನಿಂದ ಭೀಕರ ದಾಳಿ ನಡೆಸಿದ್ದನು. ಈ ಘಟನೆಯಲ್ಲಿ ಮಲಗಿದ್ದ 22 ಪುಟ್ಟ ಮಕ್ಕಳು ಸೇರಿ ಒಟ್ಟು 36 ಜನರು ಜೀವ ಕಳೆದುಕೊಂಡಿದ್ದರು. ನಂತರ ಹಂತಕ ತನ್ನ ಹೆಂಡತಿ ಮತ್ತು ಮಗನನ್ನು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದನು.
ಅದರಂತೆ, ಥೈಲ್ಯಾಂಡ್‌ನಲ್ಲಿ ಸುಮಾರು 1 ಕೋಟಿಗೂ ಹೆಚ್ಚು ಕಾನೂನುಬದ್ಧ ಮತ್ತು ಕಾನೂನುಬಾಹಿರ ಬಂದೂಕುಗಳು ಸಾರ್ವಜನಿಕರ ಬಳಿಯಿವೆ ಎಂದು ಅಂದಾಜಿಸಲಾಗಿದೆ. ಅಕ್ರಮವಾಗಿ ಬಂದೂಕು ಹೊಂದುವುದಕ್ಕೆ 10 ವರ್ಷಗಳವರೆಗೆ ಕಠಿಣ ಜೈಲು ಶಿಕ್ಷೆಯ ನಿಯಮವಿದ್ದರೂ ಕೂಡ ಜನರು ಅದನ್ನ ಕಳ್ಳ ಮಾರ್ಗದಲ್ಲಿ ಖರೀದಿಸುತ್ತಿದ್ದಾರೆ. ಹಾಗಾಗಿ, ಇಂತಹ ಪ್ರಕರಣಗಳು ಥೈಲ್ಯಾಂಡ್‌ನಲ್ಲಿ ಸಾಮಾನ್ಯವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



