ಭಾರತ-ಅಮೆರಿಕ ಸಂಬಂಧಗಳಿಗೆ ಹೊಸ ವೇಗ: ಪ್ರಧಾನಿ ಮೋದಿಗೆ ವ್ಯಾನ್ಸ್ ಕರೆ
ದೂರವಾಣಿ ಮಾತುಕತೆಯ ವೇಳೆ ಉಭಯ ನಾಯಕರು “ಭಾರತ-ಅಮೆರಿಕ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯಲ್ಲಿ ಆಗಿರುವ ಪ್ರಗತಿಯನ್ನು ಪರಿಶೀಲಿಸಿದರು” ಹಾಗೂ “ಉನ್ನತ ಮಟ್ಟದ ಮಾತುಕತೆಗಳ ನಿರಂತರ ವೇಗವನ್ನು ಗಮನಿಸಿದರು” ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ನವದೆಹಲಿ: ಭಾರತ ಮತ್ತು ಅಮೆರಿಕ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಸ್ಥಿರಗೊಳಿಸುವ ಹಾಗೂ ಕಾರ್ಯತಂತ್ರದ ಪಾಲುದಾರಿಕೆಯಲ್ಲಿ ವೇಗವನ್ನು ಕಾಯ್ದುಕೊಳ್ಳುವ ಪ್ರಯತ್ನಗಳ ನಡುವೆಯೇ, ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ನಿನ್ನೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ.
ದೂರವಾಣಿ ಮಾತುಕತೆಯ ವೇಳೆ ಉಭಯ ನಾಯಕರು “ಭಾರತ-ಅಮೆರಿಕ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯಲ್ಲಿ ಆಗಿರುವ ಪ್ರಗತಿಯನ್ನು ಪರಿಶೀಲಿಸಿದರು” ಹಾಗೂ “ಉನ್ನತ ಮಟ್ಟದ ಮಾತುಕತೆಗಳ ನಿರಂತರ ವೇಗವನ್ನು ಗಮನಿಸಿದರು” ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ವ್ಯಾಪಾರ, ರಕ್ಷಣಾ ಕ್ಷೇತ್ರ, ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು, ಇಂಧನ ಭದ್ರತೆ ಹಾಗೂ ನಿರ್ಣಾಯಕ ಖನಿಜಗಳ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ಅವರು ಪುನರುಚ್ಚರಿಸಿದರು ಎಂದು ಪ್ರಕಟಣೆ ಹೇಳಿದೆ.
ಮೋದಿ ಹಾಗೂ ವ್ಯಾನ್ಸ್ ಅವರು ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಬಗ್ಗೆಯೂ ಅಭಿಪ್ರಾಯಗಳನ್ನು ಹಂಚಿಕೊಂಡರು.
ಬಳಿಕ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದೆ. ಪ್ರಮುಖ ಕ್ಷೇತ್ರಗಳಲ್ಲಿ ಭಾರತ-ಅಮೆರಿಕ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಆಳಗೊಳಿಸುವ ಮಾರ್ಗಗಳ ಕುರಿತು ನಾವು ಚರ್ಚಿಸಿದೆವು” ಎಂದು ತಿಳಿಸಿದ್ದಾರೆ.
ತಮ್ಮ ಪುತ್ರನ ಜನನಕ್ಕಾಗಿ ವ್ಯಾನ್ಸ್ ಹಾಗೂ ಅವರ ಪತ್ನಿ ಉಷಾ ವ್ಯಾನ್ಸ್ ಅವರಿಗೂ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದರು.
“ಅವರ ಪುತ್ರನ ಜನನಕ್ಕಾಗಿ ಅವರಿಗೆ ಮತ್ತು ಸೆಕೆಂಡ್ ಲೇಡಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ ಹಾಗೂ ಇಡೀ ಕುಟುಂಬಕ್ಕೆ ಶುಭ ಹಾರೈಸಿದೆ” ಎಂದು ಮೋದಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



