ಹದಗೆಟ್ಟ ಆರೋಗ್ಯ: ಇಮ್ರಾನ್ ಖಾನ್ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್; ಪಾಕಿಸ್ತಾನ ಸುಪ್ರೀಂ ಕೋರ್ಟ್ ಮಹತ್ವದ ಆದೇಶ..!
ಭ್ರಷ್ಟಾಚಾರ ಪ್ರಕರಣದಲ್ಲಿ 2023ರಿಂದ ಜೈಲಿನಲ್ಲಿರುವ ಇಮ್ರಾನ್ ಖಾನ್ ಅವರಿಗೆ ಕಳೆದ ವರ್ಷದ ಕೊನೆಯಲ್ಲಿ ಅವರ ಪತ್ನಿಯೊಂದಿಗೆ 17 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಈ ವರ್ಷ ಇಮ್ರಾನ್ ಖಾನ್ ಅವರು ಕಣ್ಣಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದರು.

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಪಾಕಿಸ್ತಾನದ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ಸ್ಥಿತಿಗೆ ಸಂಬಂಧಿಸಿದಂತೆ ಅವರ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಮಂಗಳವಾರ ಆದೇಶಿಸಿದೆ.
ನ್ಯಾಯಮೂರ್ತಿ ಶಾಹಿದ್ ವಹೀದ್ ಅವರ ನೇತೃತ್ವದ ಪೀಠವು 73 ವರ್ಷದ ಇಮ್ರಾನ್ ಖಾನ್ ಅವರನ್ನು ಮುಂದಿನ ಎರಡು ದಿನಗಳೊಳಗೆ ರಾಜಧಾನಿ ಇಸ್ಲಾಮಾಬಾದ್‌ನ ಶಿಫಾ ಇಂಟರ್‌ನ್ಯಾಷನಲ್ ಆಸ್ಪತ್ರೆಗೆ ಸ್ಥಳಾಂತರಿಸಿ ವೈದ್ಯಕೀಯ ತಪಾಸಣೆ ನಡೆಸುವಂತೆ ಸೂಚಿಸಿದೆ.
ಭ್ರಷ್ಟಾಚಾರ ಪ್ರಕರಣದಲ್ಲಿ 2023ರಿಂದ ಜೈಲಿನಲ್ಲಿರುವ ಇಮ್ರಾನ್ ಖಾನ್ ಅವರಿಗೆ ಕಳೆದ ವರ್ಷದ ಕೊನೆಯಲ್ಲಿ ಅವರ ಪತ್ನಿಯೊಂದಿಗೆ 17 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಈ ವರ್ಷ ಇಮ್ರಾನ್ ಖಾನ್ ಅವರು ಕಣ್ಣಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದರು.
ಅವರ ಕುಟುಂಬಸ್ಥರು ಹಾಗೂ ವಕೀಲರು, ಇಮ್ರಾನ್ ಖಾನ್ ಅವರು ಬಲಗಣ್ಣಿನ ದೃಷ್ಟಿಯನ್ನು ಬಹುತೇಕ ಕಳೆದುಕೊಂಡಿದ್ದಾರೆಂದು ತಿಳಿಸಿದ್ದಾರೆ.
ಪಾಕಿಸ್ತಾನದ ಮಾಜಿ ಕ್ರಿಕೆಟ್ ನಾಯಕ ಇಮ್ರಾನ್ ಖಾನ್ ಅವರು 2018ರಿಂದ 2022ರವರೆಗೆ ದೇಶದ ಪ್ರಧಾನಿಯಾಗಿದ್ದರು. ರಾಜಕೀಯ ಬಿಕ್ಕಟ್ಟಿನ ನಡುವೆ ಅವಿಶ್ವಾಸ ನಿರ್ಣಯದ ಮೂಲಕ ಅವರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಅವರ ಸರ್ಕಾರ ಹಾಗೂ ದೇಶದ ಪ್ರಭಾವಿ ಸೇನಾ ವ್ಯವಸ್ಥೆಯ ನಡುವಿನ ಉದ್ವಿಗ್ನತೆ ಈ ರಾಜಕೀಯ ಬಿಕ್ಕಟ್ಟಿಗೆ ಪ್ರಮುಖ ಕಾರಣವಾಗಿತ್ತು.
ಪ್ರಧಾನಿ ಸ್ಥಾನದಿಂದ ಕೆಳಗಿಳಿದ ಬಳಿಕ ಇಮ್ರಾನ್ ಖಾನ್ ವಿರುದ್ಧ ಭ್ರಷ್ಟಾಚಾರ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ. ಅವರ ಪಕ್ಷವಾದ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಈ ಪ್ರಕರಣಗಳು ರಾಜಕೀಯ ಪ್ರೇರಿತವಾಗಿವೆ ಎಂದು ನಿರಂತರವಾಗಿ ಆರೋಪಿಸುತ್ತಿದ್ದಾರೆ.
ಇಮ್ರಾನ್ ಖಾನ್ ಬಂಧನದ ಬಳಿಕ 2023ರ ಮೇ ತಿಂಗಳಲ್ಲಿ ಪಾಕಿಸ್ತಾನದಾದ್ಯಂತ ಭಾರಿ ಪ್ರತಿಭಟನೆಗಳು ನಡೆದಿದ್ದವು. ಕೆಲವು ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿ, ನೂರಾರು ಮಂದಿಯನ್ನೂ ಬಂಧಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



