ವಿದೇಶ

ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದ ಟ್ರಂಪ್; ಜಾಗತಿಕ ಸುಂಕ ಶೇ. 10 ರಿಂದ 15ಕ್ಕೆ ಹೆಚ್ಚಿಸಿ ಆದೇಶ!

ಭಾರತ ಸೇರಿದಂತೆ ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು ಶುಕ್ರವಾರ ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು.

ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದ ಟ್ರಂಪ್; ಜಾಗತಿಕ ಸುಂಕ ಶೇ. 10 ರಿಂದ 15ಕ್ಕೆ ಹೆಚ್ಚಿಸಿ ಆದೇಶ!
ಡೊನಾಲ್ಡ್ ಟ್ರಂಪ್
Published On :

ವಾಷಿಂಗ್ಟನ್​: ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಜಾಗತಿಕ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದ್ದಾರೆ.

ಭಾರತ ಸೇರಿದಂತೆ ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು ಶುಕ್ರವಾರ ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಇದರ ಬೆನ್ನಲ್ಲೇ ಟ್ರಂಪ್, ತಕ್ಷಣವೇ ಜಾರಿಗೆ ಬರುವಂತೆ ಜಾಗತಿಕ ಸುಂಕವನ್ನು ಶೇ. 10ರಿಂದ ಶೇ. 15ಕ್ಕೆ ಹೆಚ್ಚಿಸುವುದಾಗಿ ಶನಿವಾರ ಘೋಷಿಸಿದ್ದಾರೆ.

ಶುಕ್ರವಾರ ಸುಪ್ರೀಂ ಕೋರ್ಟ್ ತನ್ನ ಸುಂಕ ಕ್ರಮವನ್ನು ನಿಯಂತ್ರಿಸಲು ತೆಗೆದುಕೊಂಡ "ಅಸಾಧಾರಣ ಅಮೆರಿಕನ್ ವಿರೋಧಿ ನಿರ್ಧಾರ"ದ ಸಂಪೂರ್ಣ ಪರಿಶೀಲನೆಯ ನಂತರ, ನಮ್ಮ ಆಡಳಿತವು ಆಮದು ಸುಂಕಗಳನ್ನು "ಸಂಪೂರ್ಣವಾಗಿ ಅನುಮತಿಸಲಾದ ಮತ್ತು ಕಾನೂನುಬದ್ಧವಾಗಿ ಪರೀಕ್ಷಿಸಿ ಶೇ. 15ಕ್ಕೆ ಹೆಚ್ಚಿಸುತ್ತಿದೆ ಎಂದು ಟ್ರಂಪ್ ತಮ್ಮ ಟ್ರೂತ್ ಸೋಶಿಯಲ್ ಪ್ಲಾಟ್‌ಫಾರ್ಮ್‌ನಲ್ಲಿ ತಿಳಿಸಿದ್ದಾರೆ.

ನಾನು, ಅಮೆರಿಕದ ಅಧ್ಯಕ್ಷನಾಗಿ, ತಕ್ಷಣವೇ ಜಾರಿಗೆ ಬರುವಂತೆ ಜಗತ್ತಿನ ಎಲ್ಲ ದೇಶಗಳ ಮೇಲಿನ ಶೇ. 10ರಷ್ಟು ಸುಂಕವನ್ನು ಕಾನೂನುಬದ್ಧವಾಗಿಯೇ ಶೇ. 15ಕ್ಕೆ ಹೆಚ್ಚಿಸಿದ್ದೇನೆ ಎಂದು ಟ್ರಂಪ್ ಪೋಸ್ಟ್ ಮಾಡಿದ್ದಾರೆ.

ಟ್ರಂಪ್ ಅವರು, 1974 ರ ವ್ಯಾಪಾರ ಕಾಯ್ದೆಯ 'ಸೆಕ್ಷನ್ 122' (Section 122 of the Trade Act of 1974) ಅನ್ನು ಬಳಸಿಕೊಂಡು, ಎಲ್ಲಾ ದೇಶಗಳ ಮೇಲೆ ಶೇ. 15 ರಷ್ಟು ಸುಂಕವನ್ನ ಏರಿಕೆ ಮಾಡಿದ್ದಾರೆ.

ನಿನ್ನೆಯ ಸುಪ್ರೀಂ ಕೋರ್ಟ್ ತೀರ್ಪು ತಮ್ಮನ್ನು ಮತ್ತಷ್ಟು ಶಕ್ತಿಶಾಲಿಯನ್ನಾಗಿ ಮಾಡಿದೆ ಎಂದಿರುವ ಟ್ರಂಪ್, ಸುಂಕಗಳನ್ನು ಜಾರಿಗೆ ತರಲು ಪರ್ಯಾಯ ವಿಧಾನಗಳನ್ನು ಬಳಸುವುದಾಗಿ ತಿಳಿಸಿದ್ದಾರೆ.

"ಸುಪ್ರೀಂ ಕೋರ್ಟ್‌ನ ಈ ತೀರ್ಪು ಅಧ್ಯಕ್ಷರ ಅಧಿಕಾರವನ್ನು ನಿಯಂತ್ರಿಸುವ ಮತ್ತು ಸುಂಕಗಳನ್ನು ವಿಧಿಸುವ ಸಾಮರ್ಥ್ಯವನ್ನು ಕಡಿಮೆ ಮಾಡುವ ಬದಲು ಮತ್ತಷ್ಟು ಶಕ್ತಿಶಾಲಿಯನ್ನಾಗಿ ಮಾಡಿದೆ" ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.