ಇರಾನ್ ವಿರುದ್ಧ ಕ್ಷಿಪಣಿ ದಾಳಿ: ಇಸ್ರೇಲ್, ಜೋರ್ಡಾನ್ ನಲ್ಲಿರುವ ಭಾರತೀಯ ಪ್ರಜೆಗಳಿಗೆ ಸೂಚನೆ!
ಜೋರ್ಡಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳು ಮತ್ತು ಪ್ರವಾಸಿಗರಿಗೆ ಮುನ್ನೆಚ್ಚರಿಕೆ ವಹಿಸಲು, ಸುರಕ್ಷಿತವಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳು ನೀಡುವ ಸಲಹೆಗಳನ್ನು ಪಾಲಿಸಲು ಕರೆ ನೀಡಿದೆ.

ಜೋರ್ಡಾನ್: ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತ ಶನಿವಾರ ಇಸ್ರೇಲ್ ಮತ್ತು ಜೋರ್ಡಾನ್‌ನಲ್ಲಿರುವ ತನ್ನ ಪ್ರಜೆಗಳಿಗೆ ಸಲಹೆಗಳನ್ನು ನೀಡಿದ್ದು, ಅವರು ಅತ್ಯಂತ ಜಾಗರೂಕತೆಯಿಂದ ಇರುವಂತೆ ಸೂಚಿಸಲಾಗಿದೆ.
ಇಸ್ರೇಲಿ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ನೀಡಿದ ಸುರಕ್ಷತಾ ಮಾರ್ಗಸೂಚಿಗಳು ಮತ್ತು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಇಸ್ರೇಲ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ಸಲಹೆ ನೀಡಿದೆ.
ಜೋರ್ಡಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳು ಮತ್ತು ಪ್ರವಾಸಿಗರಿಗೆ ಮುನ್ನೆಚ್ಚರಿಕೆ ವಹಿಸಲು, ಸುರಕ್ಷಿತವಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳು ನೀಡುವ ಸಲಹೆಗಳನ್ನು ಪಾಲಿಸಲು ಕರೆ ನೀಡಿದೆ.

ಇರಾನ್ ಮೇಲೆ ಇಸ್ರೇಲ್ ದಾಳಿ: ರಾಜಧಾನಿ ಟೆಹ್ರಾನ್ ನಲ್ಲಿ IDF ಮಿಸೈಲ್ ಸ್ಟ್ರೈಕ್, ತುರ್ತು ಪರಿಸ್ಥಿತಿ ಘೋಷಣೆ! Video
ವಾಣಿಜ್ಯ ವಿಮಾನ ಕಾರ್ಯಾಚರಣೆಗೆ ಅಡ್ಡಿಯಾಗುವ ಮುನ್ನವೇ ದೇಶವನ್ನು ತೊರೆಯುವಂತೆ ಜೋರ್ಡಾನ್‌ನಲ್ಲಿರುವ ಭಾರತೀಯ ಪ್ರವಾಸಿಗರಿಗೆ ಸಲಹೆ ನೀಡಿದೆ.
ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿರುವವರು 00962-770 422 276 ಸಹಾಯವಾಣಿ ಸಂಪರ್ಕಿಸಬಹುದು ಎಂದು ಜೋರ್ಡಾನ್‌ನಲ್ಲಿರುವ ರಾಯಭಾರ ಕಚೇರಿ ತಿಳಿಸಿದೆ. ಇಸ್ರೇಲ್ ಶನಿವಾರ ಇರಾನ್ ವಿರುದ್ಧ ಕ್ಷಿಪಣಿ ದಾಳಿ' ಆರಂಭಿಸಿದ ನಂತರ ಈ ಸಲಹೆ ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


