ವಿದೇಶ

ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ?: ಅಲ್ಲಿನ ವಿದೇಶಾಂಗ ಸಚಿವ ಹೇಳಿದ್ದಿಷ್ಟು...

ಎನ್‌ಬಿಸಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ, ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಅವರು "ನನಗೆ ತಿಳಿದಿರುವಂತೆ" ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ...."

ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ?: ಅಲ್ಲಿನ ವಿದೇಶಾಂಗ ಸಚಿವ ಹೇಳಿದ್ದಿಷ್ಟು...
ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ — (Photo: Office of the Iranian leader via AP)
Published On :

ಟೆಹ್ರಾನ್: ಶನಿವಾರ ಬೆಳಿಗ್ಗೆ ನಡೆದ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಕೊಲ್ಲಲ್ಪಟ್ಟಿದ್ದಾರೆ ಎಂದು ನಂಬಲಾಗಿದೆ ಎಂದು ಕೆಲವು ಇಸ್ರೇಲಿ ಮಾಧ್ಯಮ ಚಾನೆಲ್‌ಗಳು ವರದಿ ಮಾಡಿವೆ.

ಇರಾನ್‌ನ ಸರ್ವೋಚ್ಚ ನಾಯಕನನ್ನು 'ಸುರಕ್ಷಿತ ಸ್ಥಳಕ್ಕೆ' ಕರೆದೊಯ್ಯಲಾಗಿದೆ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಟೆಹ್ರಾನ್‌ನಲ್ಲಿಲ್ಲ ಮತ್ತು ಅವರನ್ನು 'ಸುರಕ್ಷಿತ ಸ್ಥಳಕ್ಕೆ' ವರ್ಗಾಯಿಸಲಾಗಿದೆ ಎಂದು ವರದಿಗಳನ್ನು ಉಲ್ಲೇಖಿಸಿ ರಾಯಿಟರ್ಸ್‌ನೊಂದಿಗೆ ಮಾತನಾಡಿದ ಇರಾನಿನ ಅಧಿಕಾರಿಯೊಬ್ಬರು ತಿಳಿಸಿದ್ದರು. ಈ ಬೆನ್ನಲ್ಲೇ ಇಸ್ರೇಲ್ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕನನ್ನು ಹತ್ಯೆ ಮಾಡಲಾಗಿದೆ ಎಂಬ ವರದಿಗಳು ಪ್ರಕಟವಾಗಿದೆ.

ಆದರೆ ಇರಾನ್ ವಿದೇಶಾಂಗ ಸಚಿವರು ಅಯತೊಲ್ಲಾ ಇನ್ನೂ ಜೀವಂತವಾಗಿದ್ದಾರೆ ಎಂದು ಹೇಳಿದ್ದಾರೆ. ಎನ್‌ಬಿಸಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ, ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಅವರು "ನನಗೆ ತಿಳಿದಿರುವಂತೆ" ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಜೀವಂತವಾಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.