ಅಮೆರಿಕದಲ್ಲಿ ರಸ್ತೆ ಅಪಘಾತ: ಹೈದರಾಬಾದ್ ಮೂಲದ ಒಂದೇ ಕುಟುಂಬದ 3 ಮಂದಿ ದಾರುಣ ಸಾವು; ಇಬ್ಬರ ಸ್ಥಿತಿ ಗಂಭೀರ
ಹೈದರಾಬಾದ್ನ ಸೈದಾಬಾದ್ ನಿವಾಸಿಯಾಗಿರುವ ಶೇಖ್ ನವೀದ್ ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ವಾಷಿಂಗ್ಟನ್: ಭೀಕರ ರಸ್ತೆ ಅಪಘಾತದಲ್ಲಿ ಹೈದರಾಬಾದ್ ಮೂಲದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ.
ಹೈದರಾಬಾದ್ನ ಸೈದಾಬಾದ್ ನಿವಾಸಿಯಾಗಿರುವ ಶೇಖ್ ನವೀದ್ ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ನವೀದ್ ಪತ್ನಿ ನಾಜಿಯಾ ಸಲ್ಮಾ, ಅವರ ಪುತ್ರ ಹಾಗೂ ಪುತ್ರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನವೀದ್ ಮತ್ತು ಅವರ ಕಿರಿಯ ಪುತ್ರಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶೇಖ್ ನವೀದ್ ಸುಮಾರು 10 ವರ್ಷಗಳ ಹಿಂದೆ ಉದ್ಯೋಗ ನಿಮಿತ್ತ ಅಮೆರಿಕಕ್ಕೆ ತೆರಳಿದ್ದರು. ಅಲ್ಲಿಯೇ ಕುಟುಂಬದೊಂದಿಗೆ ನೆಲೆಸಿದ್ದ ಅವರು ಕುಟುಂಬ ಸಮೇತರಾಗಿ ಪ್ರಯಾಣಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ನವೀದ್ ಅವರ ತಂದೆ ಶೇಖ್ ಅಬ್ದುಲ್ ಸಯೀದ್ ಅವರು ಮಗನಿಗೆ ಕರೆ ಮಾಡಿದ ವೇಳೆ ಅಮೆರಿಕದ ಪೊಲೀಸರಿಂದ ಅಪಘಾತದ ಬಗ್ಗೆ ಮಾಹಿತಿ ತಿಳಿದುಬಂದಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



