ಪಾಕಿಸ್ತಾನದಲ್ಲಿ ರಕ್ತದೋಕುಳಿ: ಸೇನಾ ಚೆಕ್‌ಪಾಯಿಂಟ್ ಧ್ವಂಸ; 15 Pak ಸೈನಿಕರು ಬಲಿ, 12 ಉಗ್ರರು ಸಾವು!
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ನಡೆದ ಆತ್ಮಹತ್ಯಾ ದಾಳಿಯಲ್ಲಿ 12 ಸೇನಾ ಸಿಬ್ಬಂದಿ, ಇಬ್ಬರು ಪೊಲೀಸರು ಮತ್ತು ಅರಣ್ಯ ಇಲಾಖೆಯ ಮಾಜಿ ಸರ್ಕಾರಿ ಅಧಿಕಾರಿ ಸೇರಿದಂತೆ 15 ಜನರು ಸಾವನ್ನಪ್ಪಿದ್ದು 12 ಮಂದಿ ಉಗ್ರರು ಹತ್ಯೆಯಾಗಿದ್ದಾರೆ.

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ನಡೆದ ಆತ್ಮಹತ್ಯಾ ದಾಳಿಯಲ್ಲಿ 12 ಸೇನಾ ಸಿಬ್ಬಂದಿ, ಇಬ್ಬರು ಪೊಲೀಸರು ಮತ್ತು ಅರಣ್ಯ ಇಲಾಖೆಯ ಮಾಜಿ ಸರ್ಕಾರಿ ಅಧಿಕಾರಿ ಸೇರಿದಂತೆ 15 ಜನರು ಸಾವನ್ನಪ್ಪಿದ್ದು 12 ಮಂದಿ ಉಗ್ರರು ಹತ್ಯೆಯಾಗಿದ್ದಾರೆ.
ಪಾಕ್ ಸೇನೆಯ ಪ್ರಕಾರ, ಟ್ಯಾಂಕ್ ಜಿಲ್ಲೆಯಲ್ಲಿ ನಡೆದ ದಾಳಿಯಲ್ಲಿ ಭದ್ರತಾ ಪಡೆಗಳು 12 ಉಗ್ರರನ್ನು ಕೊಂದಿವೆ. ದಾಳಿಕೋರರು ಭದ್ರತಾ ಗೋಡೆಗೆ ವಾಹನವನ್ನು ಡಿಕ್ಕಿ ಹೊಡೆಸಿದ್ದು ಸ್ಫೋಟವು ಚೆಕ್‌ಪಾಯಿಂಟ್‌ಗೆ ಗಂಭೀರ ಹಾನಿಯನ್ನುಂಟುಮಾಡಿತು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ದಾಳಿಯ ಹೊಣೆಯನ್ನು ಯಾವುದೇ ಗುಂಪು ತಕ್ಷಣ ಹೊತ್ತುಕೊಂಡಿಲ್ಲ, ಆದರೆ ಇಸ್ಲಾಮಿಕ್ ಭಯೋತ್ಪಾದಕ ಗುಂಪು ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಈ ಪ್ರದೇಶದಲ್ಲಿ ಗಣನೀಯ ಪ್ರಭಾವವನ್ನು ಹೊಂದಿದೆ.
ಖೈಬರ್ ಪಖ್ತುನ್ಖ್ವಾ ಮತ್ತು ದಕ್ಷಿಣ ಗಡಿ ಪ್ರಾಂತ್ಯದ ಬಲೂಚಿಸ್ತಾನದಲ್ಲಿ ಹೆಚ್ಚುತ್ತಿರುವ ದಾಳಿಗಳಿಗೆ ಅಫ್ಘಾನಿಸ್ತಾನದಿಂದ ಹುಟ್ಟಿಕೊಂಡ ಬಂಡಾಯವೇ ಕಾರಣ ಎಂದು ಪಾಕಿಸ್ತಾನ ಈ ಹಿಂದೆ ಆರೋಪಿಸಿತ್ತು. ತಾಲಿಬಾನ್ ಸರ್ಕಾರ ಅಫ್ಘಾನ್ ಈ ಆರೋಪವನ್ನು ನಿರಾಕರಿಸಿತ್ತು. ಈ ಉದ್ವಿಗ್ನತೆಯ ನಡುವೆ, ಪಾಕಿಸ್ತಾನ ಅಫ್ಘಾನ್ ಗಡಿಯುದ್ದಕ್ಕೂ ಮಾರಕ ವೈಮಾನಿಕ ದಾಳಿಗಳನ್ನು ನಡೆಸಿತ್ತು.
ಇನ್ನು ಅಫ್ಘಾನ್ ನೆಲದಲ್ಲಿರುವ ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಿಕೊಂಡಿರುವುದಾಗಿ ಪಾಕಿಸ್ತಾನ ಹೇಳಿಕೊಂಡಿತ್ತು. ಏತನ್ಮಧ್ಯೆ, ಜೂನ್‌ನಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಲ್ಲಿ ಡಜನ್ಗಟ್ಟಲೆ ಮುಗ್ಧ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ಆಡಳಿತ ಮತ್ತು ವಿಶ್ವಸಂಸ್ಥೆ ಹೇಳುತ್ತಿದೆ. ಈ ದಾಳಿಗಳು ಮತ್ತು ಆರೋಪಗಳು ಎರಡೂ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಹದಗೆಡಿಸಿವೆ, ಇದು ಗಡಿಯಲ್ಲಿ ನಿರಂತರ ಉದ್ವಿಗ್ನತೆಗೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



