ವಿದೇಶ

ಕಪ್ಪು ಸಮುದ್ರದಲ್ಲಿ ವಾಣಿಜ್ಯ ಹಡಗಿನ ಮೇಲೆ ಭೀಕರ ದಾಳಿ; ಭಾರತೀಯ ನಾವಿಕ ಬಲಿ, ಭಾರತ ತೀವ್ರ ಖಂಡನೆ..!

ಜುಲೈ 18 ರಂದು ರಷ್ಯಾದ ಪ್ರಾದೇಶಿಕ ಜಲಪ್ರದೇಶದಲ್ಲಿ ಚಲಿಸುತ್ತಿದ್ದ 'ಎಂವಿ ಒಮೊರ್ಫಿ' (MV OMORFI) ಎಂಬ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಕಪ್ಪು ಸಮುದ್ರದಲ್ಲಿ ವಾಣಿಜ್ಯ ಹಡಗಿನ ಮೇಲೆ ಭೀಕರ ದಾಳಿ; ಭಾರತೀಯ ನಾವಿಕ ಬಲಿ, ಭಾರತ ತೀವ್ರ ಖಂಡನೆ..!
ಕಪ್ಪು ಸಮುದ್ರದ ಮೂಲಕ ಸಾಗುವಾಗ ವಾಣಿಜ್ಯ ಹಡಗಿನ ಮೇಲೆ ದಾಳಿ ನಡಸಿದಿರುವುದು.
Published On :

ನವದೆಹಲಿ: ಕಪ್ಪು ಸಮುದ್ರದಲ್ಲಿ ಸಂಚರಿಸುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ನಡೆದ ಭೀಕರ ದಾಳಿಯಲ್ಲಿ ಓರ್ವ ಭಾರತೀಯ ಪ್ರಜೆ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

ಜುಲೈ 18 ರಂದು ರಷ್ಯಾದ ಪ್ರಾದೇಶಿಕ ಜಲಪ್ರದೇಶದಲ್ಲಿ ಚಲಿಸುತ್ತಿದ್ದ 'ಎಂವಿ ಒಮೊರ್ಫಿ' (MV OMORFI) ಎಂಬ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಹಡಗಿನಲ್ಲಿದ್ದ ಒಟ್ಟು ಹತ್ತು ಜನ ಸಿಬ್ಬಂದಿ ಪೈಕಿ ಮೂವರು ಭಾರತೀಯರಾಗಿದ್ದರು. ಈ ಪೈಕಿ ಒಬ್ಬರು ದಾಳಿಗೆ ಬಲಿಯಾಗಿದ್ದು, ಉಳಿದ ಇಬ್ಬರು ಭಾರತೀಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಘಟನೆಯನ್ನು ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ತೀವ್ರವಾಗಿ ಖಂಡಿಸಿದೆ. ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇದು ಜಾಗತಿಕ ಮುಕ್ತ ವ್ಯಾಪಾರ ಮತ್ತು ಹಡಗು ಸಂಚಾರದ ಭದ್ರತೆಗೆ ತಂದೊಡ್ಡಿರುವ ದೊಡ್ಡ ಬೆದರಿಕೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದೆ.

ಎಂಇಎ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, MV OMORFI ಹೆಸರಿನ ವಾಣಿಜ್ಯ ಹಡಗು ಕಪ್ಪು ಸಮುದ್ರದಲ್ಲಿ, ರಷ್ಯಾದ ಪ್ರಾದೇಶಿಕ ಜಲಪ್ರದೇಶದಲ್ಲಿ ಸಂಚರಿಸುತ್ತಿದ್ದ ವೇಳೆ ದಾಳಿಗೆ ಒಳಗಾಯಿತು.

ರಷ್ಯಾದ ಪ್ರಾದೇಶಿಕ ಜಲಪ್ರದೇಶದಲ್ಲಿ ಸಂಚರಿಸುತ್ತಿದ್ದಾಗ ದಾಳಿಗೆ ಒಳಗಾಗಿದೆ ಎಂಬ ಮಾಹಿತಿ ನಮಗೆ ಲಭಿಸಿದೆ. ಘಟನೆ ನಡೆದ ಸಂದರ್ಭದಲ್ಲಿ ಹಡಗಿನಲ್ಲಿ ಒಟ್ಟು 10 ಸಿಬ್ಬಂದಿ ಇದ್ದರು. ಅವರಲ್ಲಿ ಮೂವರು ಭಾರತೀಯ ಪ್ರಜೆಗಳಾಗಿದ್ದರು.

ಈ ದಾಳಿಯಲ್ಲಿ ಓರ್ವ ಭಾರತೀಯ ಪ್ರಜೆ ದುರಂತವಾಗಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ನಮ್ಮ ಸಂತಾಪಗಳನ್ನು ಸೂಚಿಸುತ್ತೇವೆ. ಹಡಗಿನಲ್ಲಿ ಇದ್ದ ಉಳಿದ ಇಬ್ಬರು ಭಾರತೀಯರು ಸುರಕ್ಷಿತರಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಮೃತರ ಕುಟುಂಬಕ್ಕೆ ಅಗತ್ಯವಿರುವ ಎಲ್ಲ ರೀತಿಯ ನೆರವು ಒದಗಿಸಲು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಂಬಂಧಿತ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದೆ.

ಇದೇ ವೇಳೆ ನಾಗರಿಕ ವಾಣಿಜ್ಯ ಹಡಗುಗಳ ಮೇಲೆ ನಡೆಯುತ್ತಿರುವ ಇಂತಹ ದಾಳಿಗಳು ಸಮುದ್ರ ಮಾರ್ಗದ ಸುರಕ್ಷತೆಗೆ ಗಂಭೀರ ಸವಾಲು ಎಸೆಯುತ್ತಿದ್ದು, ನಾಗರಿಕ ನಾವಿಕರ ಜೀವಕ್ಕೆ ಅಪಾಯ ಉಂಟುಮಾಡುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.