ವಿದೇಶ

ಕೆನಡಾ: ಪಂಜಾಬ್ ಮಹಿಳೆ ಹತ್ಯೆಗೈದ ಭಾರತ ಮೂಲದ ಪ್ರಿಯಕರನ ಬಂಧನ

ಪಂಜಾಬ್‌ನ ಲುಧಿಯಾನ ಜಿಲ್ಲೆಯ ಸಮ್ರಾಲಾ ಮೂಲದ ದಮನ್‌ಪ್ರೀತ್ ಕೌರ್ (23) ಹತ್ಯೆಯಾದ ಮಹಿಳೆ. ಆಕೆಯ ಪ್ರಿಯಕರ ರಿತೀಶ್ ಕುಮಾರ್ (22) ಕೊಲೆಗೈದ ಆರೋಪಿಯಾಗಿದ್ದಾನೆ.

ಕೆನಡಾ: ಪಂಜಾಬ್ ಮಹಿಳೆ ಹತ್ಯೆಗೈದ ಭಾರತ ಮೂಲದ ಪ್ರಿಯಕರನ ಬಂಧನ
ದಮನ್ ಪ್ರೀತ್ ಕೌರ್
Published On :

ನವದೆಹಲಿ: ಕೆನಡಾದ ಎಡ್ಮಂಟನ್‌ನಲ್ಲಿ ಭಾರತೀಯ ಮೂಲದ ಮಹಿಳೆಯನ್ನು ಆಕೆಯ ಲಿವ್‌ ಇನ್‌ ಪ್ರಿಯಕರ ಹತ್ಯೆ ಮಾಡಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಪಂಜಾಬ್‌ನ ಲುಧಿಯಾನ ಜಿಲ್ಲೆಯ ಸಮ್ರಾಲಾ ಮೂಲದ ದಮನ್‌ಪ್ರೀತ್ ಕೌರ್ (23) ಹತ್ಯೆಯಾದ ಮಹಿಳೆ. ಆಕೆಯ ಪ್ರಿಯಕರ ರಿತೀಶ್ ಕುಮಾರ್ (22) ಕೊಲೆಗೈದ ಆರೋಪಿಯಾಗಿದ್ದಾನೆ.

ಜು.9 ರಂದು ರಿತೀಶ್‌ ಆಕೆಯ ಕತ್ತು ಹಿಸುಕಿ, ಮಾರಣಾಂತಿಕ ಹಲ್ಲೆ ಮಾಡಿದ್ದ. ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದುದ್ದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾದ ಮೂರು ದಿನಗಳ ಬಳಿಕ ಚಿಕಿತ್ಸೆ ಫಲಿಸದೇ ಆಕೆ ಸಾವನ್ನಪ್ಪಿದ್ದಳು.

ತನಿಖೆ ನಡೆಸಿದ ಪೊಲೀಸರು ಜುಲೈ 14 ರಂದು ಇದು ಕೊಲೆ ಎಂದು ಘೋಷಿಸಿದ್ದರು. ಜು.22 ರಂದು ಆರೋಪಿಯನ್ನು ಬಂಧಿಸಿದ್ದರು. ಬಳಿಕ ಜುಲೈ 23 ರಂದು ಪೊಲೀಸರು ಮಹಿಳೆಯನ್ನು ಕತ್ತು ಹಿಸುಕಿಕೊಲೆ ಮಾಡಲಾಗಿದೆ ಎಂದು ಬಹಿರಂಗಪಡಿಸಿದರು. ತನಿಖೆ ಕಾರಣದಿಂದಾಗಿ ಈ ವಿಚಾರವನ್ನು ಪೊಲೀಸರು ಅಲ್ಲಿಯ ತನಕ ತಡೆಹಿಡಿದಿದ್ದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.