ವಿದೇಶ

Iran-US War: ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ; ಒಬ್ಬ ಭಾರತೀಯ ಸಾವು!

ಇರಾನ್ ಮತ್ತು ಯುಎಸ್ ನಡುವಿನ ಮಿಲಿಟರಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ, ಇಂದು ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಭಾರತೀಯನೋರ್ವ ಸಾವನ್ನಪ್ಪಿದ್ದಾನೆ.

Iran-US War: ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ; ಒಬ್ಬ ಭಾರತೀಯ ಸಾವು!
Published On :

ನವದೆಹಲಿ: ಇರಾನ್ ಮತ್ತು ಯುಎಸ್ ನಡುವಿನ ಮಿಲಿಟರಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ, ಇಂದು ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಭಾರತೀಯನೋರ್ವ ಸಾವನ್ನಪ್ಪಿದ್ದಾನೆ. ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ Xನಲ್ಲಿ ಪೋಸ್ಟ್‌ ಮಾಡಿದ್ದು ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ದಾಳಿಯಲ್ಲಿ ಭಾರತೀಯ ನಾಗರಿಕನೊಬ್ಬ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದೆ. ಡ್ರೋನ್ ದಾಳಿ ಬೆನ್ನಲ್ಲೇ ಕುವೈತ್ ತನ್ನ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿದೆ.

ಘಟನೆಯ ನಂತರ, ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ, ಜೂನ್ 4, 2026 ರಂದು ಮಧ್ಯಾಹ್ನ 12 ಗಂಟೆಯವರೆಗೆ ಕುವೈತ್‌ಗೆ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳನ್ನು ಸ್ಥಗಿತಗೊಳಿಸಿದೆ. ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ಪ್ರಯಾಣಿಕರ ಕಟ್ಟಡವನ್ನು ಡ್ರೋನ್ ಗುರಿಯಾಗಿಸಿಕೊಂಡಿತ್ತು. ದಾಳಿಯ ನಂತರ, ಕುವೈತ್ ನಾಗರಿಕ ವಿಮಾನಯಾನ ಪ್ರಾಧಿಕಾರವು ತಕ್ಷಣದಿಂದ ಜಾರಿಗೆ ಬರುವಂತೆ ದೇಶದ ವಾಯುಪ್ರದೇಶವನ್ನು ಮುಚ್ಚಲು ನಿರ್ಧರಿಸಿದೆ. ಎಲ್ಲಾ ವಾಯು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ವಿಮಾನಗಳನ್ನು ಪರ್ಯಾಯ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗುತ್ತಿದೆ ಎಂದು ಹೇಳಿದೆ.

ಇಂಡಿಗೋ ಪ್ರಯಾಣ ಸಲಹೆ

ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಇಂಡಿಗೋ ಹೇಳಿಕೆ ನೀಡಿದೆ. ಇದು ಪ್ರಯಾಣಿಕರ ಪ್ರಯಾಣ ಯೋಜನೆಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ ಮತ್ತು ನಾವು ವಿಷಾದಿಸುತ್ತೇವೆ, ಆದರೆ ನಮ್ಮ ಗ್ರಾಹಕರು ಮತ್ತು ಉದ್ಯೋಗಿಗಳ ಸುರಕ್ಷತೆಯು ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.