ಅಮೆರಿಕ ದಾಳಿ: ಸೌದಿ, ಟರ್ಕಿ ಜೊತೆಗೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಮಾತುಕತೆ!
ಸಶಸ್ತ್ರ ಪಡೆಗಳಿಂದ ಪ್ರತೀಕಾರದ ಕ್ರಮ ಕೈಗೊಳ್ಳುವ ಬಗ್ಗೆ ಇರಾನ್ ನ ನಿಲುವನ್ನು ಅವರು ಸ್ಪಷ್ಪಪಡಿಸಿದ್ದಾರೆ.

ಟೆಹರಾನ್: ದಕ್ಷಿಣ ಇರಾನ್ ನಲ್ಲಿ ಅಮೆರಿಕ ದಾಳಿ ನಂತರ ಸೌದಿ ಅರೇಬಿಯಾ ಮತ್ತು ಟರ್ಕಿ ವಿದೇಶಾಂಗ ಸಚಿವರೊಂದಿಗೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ರಾತ್ರಿಯಿಡೀ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ ಎಂದು ಇರಾನ್ ನ IRNA ನ್ಯೂಸ್ ಏಜೆನ್ಸಿ ವರದಿ ಮಾಡಿದೆ. ಅಮೆರಿಕದ ದಾಳಿಯ ನಂತರದ ಪ್ರಾದೇಶಿಕ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ.
ಈ ಮಾತುಕತೆ ವೇಳೆಯಲ್ಲಿ ಅಮೆರಿಕದ ಮಿಲಿಟರಿ ಆಕ್ರಮಣ ಮತ್ತು ಇರಾನ್‌ನ ರಾಷ್ಟ್ರೀಯ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ಉಲ್ಲಂಘನೆಯನ್ನು ಅರಘ್ಚಿ ತೀವ್ರವಾಗಿ ಖಂಡಿಸಿದ್ದಾರೆ.
ಸಶಸ್ತ್ರ ಪಡೆಗಳಿಂದ ಪ್ರತೀಕಾರದ ಕ್ರಮ ಕೈಗೊಳ್ಳುವ ಬಗ್ಗೆ ಇರಾನ್ ನ ನಿಲುವನ್ನು ಅವರು ಸ್ಪಷ್ಪಪಡಿಸಿದ್ದಾರೆ.
ಇರಾನ್‌ನ ಕಾನೂನುಬದ್ಧ ಸ್ವರಕ್ಷಣೆಯ ಹಕ್ಕು ಮತ್ತು ಆಕ್ರಮಣದ ವಿರುದ್ಧ ಸಶಸ್ತ್ರ ಪಡೆಗಳಿಂದ ಪ್ರತೀಕಾರದ ಪ್ರತಿಕ್ರಿಯೆಗಳನ್ನು ಪ್ರಾರಂಭಿಸುವುದನ್ನು ಅರಘ್ಚಿ ಸ್ಪಷ್ಟವಾಗಿ ಒತ್ತಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಬಹ್ರೇನ್‌ನಲ್ಲಿರುವ ಅಮೆರಿಕದ ಐದನೇ ನೌಕಾಪಡೆಯ ವಿರುದ್ಧ ಡ್ರೋನ್ ದಾಳಿ ನಡೆಸಿದ ನಂತರ ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬಿಕ್ಕಟ್ಟು ಮತ್ತಷ್ಟು ಬಿಗಡಾಯಿಸಿದೆ. ಮುಂದಿನ ವಿದ್ಯಮಾನಗಳು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



