B-52 Bomber Bursts: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಭೀಕರ ವಿಮಾನ ಅಪಘಾತ; ಬಿ-52 ಬಾಂಬರ್ ಪತನ, 8 ಮಂದಿ ಸಾವು! Video
ಸೋಮವಾರ ಬೆಳಿಗ್ಗೆ ಸುಮಾರು 11:20 ರ ವೇಳೆಗೆ ಈ ಭೀಕರ ಅಪಘಾತ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ವಿಮಾನದಲ್ಲಿದ್ದ ಯಾರೊಬ್ಬರೂ ಬದುಕುಳಿದಿಲ್ಲ ಎಂದು ವಾಯುನೆಲೆಯ ಅಧಿಕಾರಿಗಳು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಕ್ಯಾಲಿಫೋರ್ನಿಯಾ: ಅಮೆರಿಕದ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಯುಎಸ್ ವಾಯುಪಡೆಯ ಪ್ರಮುಖ ಕೇಂದ್ರವಾದ 'ಎಡ್ವರ್ಡ್ಸ್ ವಾಯುನೆಲೆ'ಯಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಬಿ-52 ಬಾಂಬರ್ ವಿಮಾನ ಪತನಗೊಂಡಿದ್ದು, ವಿಮಾನದಲ್ಲಿದ್ದ ಎಂಟು ಜನರು ದುರ್ಮರಣಕ್ಕೀಡಾಗಿದ್ದಾರೆ.
ಸೋಮವಾರ ಬೆಳಿಗ್ಗೆ ಸುಮಾರು 11:20 ರ ವೇಳೆಗೆ ಈ ಭೀಕರ ಅಪಘಾತ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ವಿಮಾನದಲ್ಲಿದ್ದ ಯಾರೊಬ್ಬರೂ ಬದುಕುಳಿದಿಲ್ಲ ಎಂದು ವಾಯುನೆಲೆಯ ಅಧಿಕಾರಿಗಳು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.
ದಿನನಿತ್ಯದ ಪರೀಕ್ಷಾ ಕಾರ್ಯಾಚರಣೆಯಲ್ಲಿ ಎಂಟು ಜನರನ್ನು ಹೊತ್ತೊಯ್ಯುತ್ತಿದ್ದ ವಾಯುಪಡೆಯ ಬಿ -52 ಸ್ಟ್ರಾಟೋಫೋರ್ಟ್ರೆಸ್ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದೆ. ತುರ್ತು ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿವೆ.
ಅಪಘಾತದ ಕಾರಣ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು 'ಎಡ್ವರ್ಡ್ಸ್ ವಾಯುನೆಲೆ ಹೇಳಿಕೆಯಲ್ಲಿ ತಿಳಿಸಿದೆ.
ಘಟನೆಯ ನಂತರ ವಾಯುನೆಲೆಯನ್ನು ತಕ್ಷಣವೇ ಬಂದ್ ಮಾಡಲಾಯಿತು. ಒಳ ಬರುವ ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಯಿತು.ರಕ್ಷಣಾ ಮತ್ತು ತನಿಖಾ ಕಾರ್ಯಾಚರಣೆಗೆ ಹೆಚ್ಚಿನ ಆದ್ಯತೆ ನೀಡಲು ವಾಣಿಜ್ಯೇತರ ಹಾಗೂ ಸಾಮಾನ್ಯ ಸಂದರ್ಶಕರ ಪಾಸ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಬೋಯಿಂಗ್ ಬಿ-52 ಸ್ಟ್ರಾಟೊಫೋರ್ಟ್ರೆಸ್ ದೀರ್ಘ-ಶ್ರೇಣಿಯ ಅತ್ಯಂತ ಶಕ್ತಿಶಾಲಿ ಬಾಂಬರ್ ವಿಮಾನವಾಗಿದ್ದು, 1955 ರಿಂದ ಅಮೆರಿಕ ಸೇನೆಯಲ್ಲಿದೆ. ಇದನ್ನು ಸಾಂಪ್ರದಾಯಿಕ ಹಾಗೂ ಪರಮಾಣು ಶಸ್ತ್ರಾಸ್ತ್ರಗಳನ್ನು ಸಾಗಿಸಲು ಬಳಸಲಾಗುತ್ತದೆ. ಇನ್ನು ಈ ದುರಂತ ನಡೆದ ಎಡ್ವರ್ಡ್ಸ್ ವಾಯುನೆಲೆಯು ಅಮೆರಿಕದ ವಿಮಾನಗಳ ಪರೀಕ್ಷೆ ಮತ್ತು ಅಭಿವೃದ್ಧಿಯ ಪ್ರಮುಖ ಕೇಂದ್ರವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



