ತಂತ್ರಜ್ಞಾನ ಸುಲಭವಾಗಿ ಎಲ್ಲರಿಗೂ ದೊರೆತಾಗ ಮಾತ್ರ ಪ್ರಗತಿ ಸಾಧ್ಯ: VivaTech ನಲ್ಲಿ ಪ್ರಧಾನಿ ಮೋದಿ!
ಫ್ರಾನ್ಸ್ ಮತ್ತು ಸ್ಲೋವಾಕಿಯಾಕ್ಕೆ ಏಳು ದಿನಗಳ ಅಧಿಕೃತ ಭೇಟಿಯಲ್ಲಿರುವ ಪ್ರಧಾನಿ, ಪ್ಯಾರಿಸ್‌ನಲ್ಲಿ ನಡೆದ ಯುರೋಪಿನ ಅತಿದೊಡ್ಡ ತಂತ್ರಜ್ಞಾನ ಮತ್ತು ನವೋದ್ಯಮ ಕಾರ್ಯಕ್ರಮವಾದ ವಿವಾಟೆಕ್ ಶೃಂಗಸಭೆ 2026 ರಲ್ಲಿ ಈ ಹೇಳಿಕೆ ನೀಡಿದ್ದಾರೆ.

ಪ್ಯಾರಿಸ್: ತಂತ್ರಜ್ಞಾನ ಎಲ್ಲರಿಗೂ ಸುಲಭವಾಗಿ ದೊರೆತಾಗ ಮಾತ್ರ ಪ್ರಗತಿಗೆ ಕಾರಣವಾಗಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಆದರೆ ಭಾರತ ತಾಂತ್ರಿಕ ಪ್ರಗತಿಯಿಂದ ತ್ವರಿತ ಬದಲಾವಣೆಯತ್ತ ಸಾಗುತ್ತಿದೆ ಎಂದು ಹೇಳಿದ್ದಾರೆ.
ಫ್ರಾನ್ಸ್ ಮತ್ತು ಸ್ಲೋವಾಕಿಯಾಕ್ಕೆ ಏಳು ದಿನಗಳ ಅಧಿಕೃತ ಭೇಟಿಯಲ್ಲಿರುವ ಪ್ರಧಾನಿ, ಪ್ಯಾರಿಸ್‌ನಲ್ಲಿ ನಡೆದ ಯುರೋಪಿನ ಅತಿದೊಡ್ಡ ತಂತ್ರಜ್ಞಾನ ಮತ್ತು ನವೋದ್ಯಮ ಕಾರ್ಯಕ್ರಮವಾದ ವಿವಾಟೆಕ್ ಶೃಂಗಸಭೆ 2026 ರಲ್ಲಿ ಈ ಹೇಳಿಕೆ ನೀಡಿದ್ದಾರೆ.
ವಿದೇಶಿ ಪ್ರಜೆಗಳಿಗೆ ಆಂಥ್ರೊಪಿಕ್‌ನ ಇತ್ತೀಚಿನ ಕೃತಕ ಬುದ್ಧಿಮತ್ತೆ (AI) ಮಾದರಿಗಳ ಬಳಕೆಯನ್ನು ಅಮೆರಿಕ ನಿರ್ಬಂಧಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ರೀತಿಯ ಹೇಳಿಕೆ ನೀಡಿದ್ದಾರೆ. ವಿವಾಟೆಕ್ ಶೃಂಗಸಭೆಯಲ್ಲಿ ಮಾತನಾಡಿದ ಮೋದಿ, ಭಾರತಕ್ಕಾಗಿ AI ಎಂದರೆ ಎಲ್ಲರನ್ನೂಳಗೊಂಡದ್ದು ಎಂದರ್ಥ ಎಂದರು.
ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಪ್ರಗತಿಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಪ್ರಧಾನಿ, ಜಾಗತಿಕ ಡಿಜಿಟಲ್ ವಹಿವಾಟುಗಳಲ್ಲಿ ಅರ್ಧದಷ್ಟು ದೇಶದಲ್ಲಿ ನಡೆಯುತ್ತಿದೆ.ತಂತ್ರಜ್ಞಾನವು ಸಮಾಜದಲ್ಲಿ ಎಲ್ಲರಿಗೂ ಸುಲಭವಾಗಿ ದೊರಕಿದಾಗ ಮಾತ್ರ ದೇಶ ಪ್ರಗತಿಯಾಗಲಿದೆ. ಕಳೆದ ದಶಕದಲ್ಲಿ ಭಾರತವು ತಂತ್ರಜ್ಞಾನದಿಂದ ತ್ವರಿತಗತಿಯಲ್ಲಿ ಬದಲಾವಣೆಯತ್ತ ಸಾಗುತ್ತಿದೆ ಎಂದು ಅವರು ಹೇಳಿದರು.
"ವಿಶ್ವದ ಅತಿದೊಡ್ಡ ಡಿಜಿಟಲ್ ಗುರುತಿನ ವ್ಯವಸ್ಥೆಯನ್ನು ರಚಿಸುವುದರಿಂದ ಹಿಡಿದು ವಿಶ್ವದ ಅತಿದೊಡ್ಡ ಡಿಜಿಟಲ್ ಪಾವತಿ ವೇದಿಕೆಗಳವರೆಗೆ, ಆರ್ಥಿಕ ಸೇರ್ಪಡೆ, ಶಿಕ್ಷಣ, ಟೆಲಿಮೆಡಿಸಿನ್ ಗಾಗಿ ಬೃಹತ್ ಪ್ರಮಾಣದಲ್ಲಿ ತಂತ್ರಜ್ಞಾನವನ್ನು ಬಳಸುತ್ತಿದ್ದೇವೆ ಎಂದು ಅವರು ತಿಳಿಸಿದರು.

ಟ್ರಂಪ್-ಮೋದಿ ಮಾತುಕತೆ: ನಾವಿಕರ ಸಾವು ವಿಷಯ ಪ್ರಸ್ತಾಪ; ಇರಾನ್ ಒಪ್ಪಂದದಲ್ಲಿ ಸುರಕ್ಷತೆ ಸೇರಿಸಲು ಪ್ರಧಾನಿ ಒತ್ತಾಯ
ವಿವಾಟೆಕ್ ಯುರೋಪಿನ ಪ್ರಮುಖ ತಂತ್ರಜ್ಞಾನ ಮತ್ತು ನಾವೀನ್ಯತೆ ಸಭೆಯಾಗಿದ್ದು, ಭಾರತವು ಇದರಲ್ಲಿ ಅತಿದೊಡ್ಡ ಪೆವಿಲಿಯನ್ ಸ್ಥಾಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


