ಇಸ್ರೇಲ್ ವೈಮಾನಿಕ ದಾಳಿಗೆ ತತ್ತರಿಸಿದ ಲೆಬನಾನ್: 16 ಮಂದಿ ಬಲಿ; ಅಮೆರಿಕ-ಇರಾನ್ ಶಾಂತಿ ಮಾತುಕತೆ ಮುಂದೂಡಿಕೆ!
ಇಸ್ರೇಲ್ ಸೇನೆ, ದಕ್ಷಿಣ ಲೆಬನಾನ್ನ ವಿವಿಧ ಪ್ರದೇಶಗಳಲ್ಲಿ ರಾತ್ರಿ ಪೂರ್ತಿ ಕಾರ್ಯಾಚರಣೆ ನಡೆಸಿರುವುದಾಗಿ ತಿಳಿಸಿದೆ. ಇದೇ ವೇಳೆ, ಇರಾನ್ ಬೆಂಬಲಿತ ಹಿಜ್ಬುಲ್ಲಾ ಸಂಘಟನೆ ಈ ಭಾಗದಲ್ಲಿ ತೀವ್ರ ಯುದ್ಧ ನಡೆಯುತ್ತಿರುವುದಾಗಿ ಹೇಳಿದೆ.

ಜೆರುಸಲೇಮ್: ದಕ್ಷಿಣ ಲೆಬನಾನ್ನಲ್ಲಿ ಇಸ್ರೇಲ್ ಪಡೆಗಳು ರಾತ್ರೋರಾತ್ರಿ ನಡೆಸಿದ ಭೀಕರ ವಾಯುದಾಳಿಯಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ. ಈ ಹಠಾತ್ ಸಂಘರ್ಷದಿಂದಾಗಿ ಸ್ವಿಟ್ಜರ್ಲೆಂಡ್ನಲ್ಲಿ ನಡೆಯಬೇಕಿದ್ದ ಅಮೆರಿಕಾ ಮತ್ತು ಇರಾನ್ ನಡುವಿನ ಅತ್ಯಂತ ನಿರ್ಣಾಯಕ ಶಾಂತಿ ಮಾತುಕತೆಗಳು ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿವೆ.
ಇಸ್ರೇಲ್ ರಕ್ಷಣಾ ಪಡೆಗಳು (IDF) ದಕ್ಷಿಣ ಲೆಬನಾನ್ನ ತೈರ್ (Tyre) ನಗರದ ಜಬಲ್ ಅಮೆಲ್ ಆಸ್ಪತ್ರೆಯ ಸುತ್ತಮುತ್ತಲಿನ ಪ್ರದೇಶಗಳ ಮೇಲೆ ತೀವ್ರ ಬಾಂಬ್ ದಾಳಿ ನಡೆಸಿವೆ. ಪರಿಣಾಮ ಆಸ್ಪತ್ರೆ ಸಮೀಪದ ಹಲವಾರು ಕಟ್ಟಡಗಳು ಧ್ವಂಸಗೊಂಡಿದ್ದು, ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಇಸ್ರೇಲ್ ಸೇನೆ, ದಕ್ಷಿಣ ಲೆಬನಾನ್ನ ವಿವಿಧ ಪ್ರದೇಶಗಳಲ್ಲಿ ರಾತ್ರಿ ಪೂರ್ತಿ ಕಾರ್ಯಾಚರಣೆ ನಡೆಸಿರುವುದಾಗಿ ತಿಳಿಸಿದೆ. ಇದೇ ವೇಳೆ, ಇರಾನ್ ಬೆಂಬಲಿತ ಹಿಜ್ಬುಲ್ಲಾ ಸಂಘಟನೆ ಈ ಭಾಗದಲ್ಲಿ ತೀವ್ರ ಯುದ್ಧ ನಡೆಯುತ್ತಿರುವುದಾಗಿ ಹೇಳಿದೆ.
ಲೆಬನಾನ್ನಲ್ಲಿ ಮುಂದುವರಿದಿರುವ ಈ ಹಿಂಸಾಚಾರ, ಅಮೆರಿಕಾ-ಇರಾನ್ ನಡುವಿನ ಹೊಸ ಒಪ್ಪಂದಕ್ಕೆ ಧಕ್ಕೆಯಾಗುವ ಸಾಧ್ಯತೆ ಇದೆ.
ಈ ಒಪ್ಪಂದದ ಪ್ರಕಾರ ಲೆಬನಾನ್ ಸೇರಿದಂತೆ ಸಂಘರ್ಷ ಪೀಡಿತ ಎಲ್ಲಾ ಪ್ರದೇಶಗಳಲ್ಲಿ ತಕ್ಷಣದ ಕದನ ವಿರಾಮ ಜಾರಿಯಾಗಬೇಕು ಹಾಗೂ ಲೆಬನಾನ್ನ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವವನ್ನು ಕಾಪಾಡಬೇಕು ಎಂದು ಉಲ್ಲೇಖಿಸಲಾಗಿದೆ.
ಆದರೆ, ಈ ವರ್ಷದ ಅಂತ್ಯದೊಳಗೆ ಚುನಾವಣೆ ಎದುರಿಸಲಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಹಿಜ್ಬುಲ್ಲಾ ಬೆದರಿಕೆ ಸಂಪೂರ್ಣವಾಗಿ ನಿವಾರಣೆಯಾಗುವವರೆಗೆ ಲೆಬನಾನ್ನಿಂದ ಇಸ್ರೇಲ್ ಸೇನೆ ಹಿಂತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದೀಗ ಲೆಬನಾನ್ನಲ್ಲಿ ನಡೆಯುತ್ತಿರುವ ದಾಳಿಗಳ ನಡುವೆಯೇ, ಇರಾನ್ ಮತ್ತು ಅಮೆರಿಕಾ ನಡುವೆ ಸ್ವಿಟ್ಜರ್ಲ್ಯಾಂಡ್ನಲ್ಲಿ ನಡೆಯಬೇಕಿದ್ದ ಮುಂದಿನ ಹಂತದ ಮಾತುಕತೆಗಳು ಮುಂದೂಡಲ್ಪಟ್ಟಿವೆ.
ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದಲ್ಲಿ ನಡೆಯಬೇಕಿದ್ದ ಈ ಸಭೆಗೆ ಸಂಬಂಧಿಸಿದಂತೆ ಅವರ ಸ್ವಿಟ್ಜರ್ಲ್ಯಾಂಡ್ ಪ್ರವಾಸವನ್ನು ಮುಂದೂಡಲಾಗಿದೆ.
ಶ್ವೇತಭವನ ಇದಕ್ಕೆ ಆಡಳಿತಾತ್ಮಕ ಮತ್ತು ತಾಂತ್ರಿಕ ಕಾರಣಗಳನ್ನು ಉಲ್ಲೇಖಿಸಿದರೂ, ಲೆಬನಾನ್ನಲ್ಲಿ ಇಸ್ರೇಲ್ ನಡೆಸುತ್ತಿರುವ ಸೇನಾ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಇರಾನ್ ತನ್ನ ನಿಯೋಗವನ್ನು ಕಳುಹಿಸುವುದನ್ನು ವಿಳಂಬ ಮಾಡಿದೆ ಎಂದು ಹೇಳಲಾಗುತ್ತಿದೆ.
ಫ್ರಾನ್ಸ್ ಅಧ್ಯಕ್ಷ ಇಮ್ಮಾನುಯೆಲ್ ಮ್ಯಾಕ್ರೋನ್ ಅವರೊಂದಿಗೆ ವರ್ಸೈ ಅರಮನೆಯಲ್ಲಿ ಭೋಜನದ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ನಡುವೆ ಪ್ರಾಥಮಿಕ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಈ ಒಪ್ಪಂದವು ತಕ್ಷಣದಿಂದಲೇ ಜಾರಿಗೆ ಬಂದಿದೆ.
ಒಪ್ಪಂದದ ಬಳಿಕ ಮಾತನಾಡಿದ್ದ ಜೆಡಿ ವ್ಯಾನ್ಸ್, “ಈ ಕ್ಷಣದಲ್ಲಿ ಇಸ್ರೇಲ್ ಪರ ಸಹಾನುಭೂತಿ ಹೊಂದಿರುವ ಏಕೈಕ ರಾಷ್ಟ್ರ ನಾಯಕ ಡೊನಾಲ್ಡ್ ಟ್ರಂಪ್” ಎಂದು ಹೇಳುವ ಮೂಲಕ ಇಸ್ರೇಲ್ಗೆ ಪರೋಕ್ಷ ಎಚ್ಚರಿಕೆಯನ್ನೂ ನೀಡಿದ್ದರು.
ಲೆಬನಾನ್ನಲ್ಲಿ ಮುಂದುವರಿದಿರುವ ಸಂಘರ್ಷ ಮತ್ತು ಅಮೆರಿಕಾ-ಇರಾನ್ ಶಾಂತಿ ಪ್ರಯತ್ನಗಳ ನಡುವಿನ ಈ ಬೆಳವಣಿಗೆಗಳು ಮಧ್ಯಪ್ರಾಚ್ಯದಲ್ಲಿ ಸ್ಥಿರತೆ ಸಾಧಿಸುವ ಪ್ರಯತ್ನಗಳಿಗೆ ಹೊಸ ಸವಾಲಾಗಿ ಪರಿಣಮಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



