ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆ: ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್
ಮೂರು ದಶಕಗಳ ಕಾಲ ಇರಾನ್ ಅನ್ನು ಆಳಿದ ಖಮೇನಿ, ಫೆಬ್ರವರಿ 28 ರಂದು ಟೆಹ್ರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ಜಂಟಿಯಾಗಿ ನಡೆಸಿದ ವೈಮಾನಿಕ ದಾಳಿಯ ಮೊದಲ ದಿನ ಹತ್ಯೆಯಾಗಿದ್ದರು.

ಟೆಹ್ರಾನ್: ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಹತರಾದ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಆಹ್ವಾನ ನೀಡಿದ್ದಾರೆ ಎಂದು ರಾಜತಾಂತ್ರಿಕ ಮೂಲಗಳು ಬುಧವಾರ ತಿಳಿಸಿವೆ.
ಕಳೆದ ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಖಮೇನಿ ಅಂತ್ಯಕ್ರಿಯೆಯನ್ನು ಸಂಘರ್ಷದಿಂದಾಗಿ ಮುಂದೂಡಲಾಗಿತ್ತು. ಇದೀಗ ಜುಲೈ 5ರಿಂದ ಜುಲೈ 9ರ ವರೆಗೆ ಅಂತ್ಯಕ್ರಿಯೆಯ ವಿಧಿವಿಧಾನಗಳು ನಡೆಯಲಿದ್ದು, ಇರಾನ್ ಸೇರಿದಂತೆ ವಿವಿಧ ನಗರಗಳಲ್ಲಿ ಬೃಹತ್ ಮೆರವಣಿಗೆ ನಡೆಯಲಿದೆ. ಈ ವೇಳೆ 1 ಕೋಟಿಗೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆಯಿದೆ.
ಇನ್ನು ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ಮೋದಿ ಅವರಿಗೆ ಇರಾನ್ ಅಧ್ಯಕ್ಷರು ಆಹ್ವಾನ ನೀಡಿದ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಮೂರು ದಶಕಗಳ ಕಾಲ ಇರಾನ್ ಅನ್ನು ಆಳಿದ ಖಮೇನಿ, ಫೆಬ್ರವರಿ 28 ರಂದು ಟೆಹ್ರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ಜಂಟಿಯಾಗಿ ನಡೆಸಿದ ವೈಮಾನಿಕ ದಾಳಿಯ ಮೊದಲ ದಿನ ಹತ್ಯೆಯಾಗಿದ್ದರು. ನಂತರ ಅಲಿ ಖಮೇನಿಯವರ ಪುತ್ರ ಮೊಜ್ತಬಾ ಖಮೇನಿ ಅವರನ್ನು ಇರಾನ್ ಮುಂದಿನ ಸರ್ವೋಚ್ಚ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು.
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧ್ಯಕ್ಷ ಪೆಜೆಶ್ಕಿಯಾನ್ ಅವರು ಅಂತ್ಯಕ್ರಿಯೆ ವಿಧಿವಿಧಾನಗಳಿಗೆ ಆಹ್ವಾನಿಸಿದ್ದಾರೆ ಎಂದು ಇರಾನ್ ರಾಜತಾಂತ್ರಿಕ ಮೂಲಗಳು ತಿಳಿಸಿವೆ.
ಜುಲೈ 5, 6 ಮತ್ತು 7 ರಂದು ಟೆಹ್ರಾನ್ ಹಾಗೂ ಕೋಮ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅಂತಿಮ ವಿಧಿವಿಧಾನಗಳು ಜುಲೈ 9 ರಂದು ಮಶಾದ್ ನಗರದಲ್ಲಿ ನಡೆಯಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



