ವಿದೇಶ

West Asia conflict: ಇರಾನ್ ಮೇಲಿನ ಯುದ್ಧ ಇನ್ನು 4-5 ವಾರಗಳ ಕಾಲ ನಡೆಯಲಿದೆ- ಡೊನಾಲ್ಡ್ ಟ್ರಂಪ್

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸೇನಾ ಉದ್ವಿಗ್ನತೆಯ ಮಧ್ಯೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುದ್ದಿಗೋಷ್ಠಿ ನಡೆಸಿದರು. ಇರಾನ್ ವಿರುದ್ಧ ನಮ್ಮ ದಾಳಿಯನ್ನು ತೀವ್ರಗೊಳಿಸುತ್ತೇವೆ. ನಮ್ಮ ಕಾರ್ಯಾಚರಣೆ ಮುಂದುವರೆಸುತ್ತೇವೆ.

West Asia conflict: ಇರಾನ್ ಮೇಲಿನ ಯುದ್ಧ ಇನ್ನು 4-5 ವಾರಗಳ ಕಾಲ ನಡೆಯಲಿದೆ- ಡೊನಾಲ್ಡ್ ಟ್ರಂಪ್
ಡೊನಾಲ್ಡ್ ಟ್ರಂಪ್
Published On :

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸೇನಾ ಉದ್ವಿಗ್ನತೆಯ ಮಧ್ಯೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುದ್ದಿಗೋಷ್ಠಿ ನಡೆಸಿದರು. ಇರಾನ್ ವಿರುದ್ಧ ನಮ್ಮ ದಾಳಿಯನ್ನು ತೀವ್ರಗೊಳಿಸುತ್ತೇವೆ. ನಮ್ಮ ಕಾರ್ಯಾಚರಣೆ ಮುಂದುವರೆಸುತ್ತೇವೆ. ಈ ಯುದ್ಧ ಇನ್ನು 4-5 ವಾರಗಳ ಕಾಲ ನಡೆಯುತ್ತೆ. ಜಗತ್ತಿನಲ್ಲೇ ನಮ್ಮ ಸೇನೆ ಹೆಚ್ಚು ಬಲಶಾಲಿಯಾಗಿದ್ದು ಈ ಯುದ್ಧದಲ್ಲಿ ಅಮೆರಿಕ ಮೇಲುಗೈ ಸಾಧಿಸಲಿದೆ ಎಂದರು. ಇರಾನ್ ಮೇಲೆ ದಾಳಿ ಮಾಡುವುದಕ್ಕೂ ಮುನ್ನ ಹಲವು ಬಾರಿ ನಾವು ಎಚ್ಚರಿಕೆ ನೀಡಿದ್ದೇವು. ಆದರೆ ಇರಾನ್ ನಮ್ಮ ಎಚ್ಚರಿಕೆ ನಿರ್ಲಕ್ಷ್ಯ ಮಾಡಿತ್ತು. ಇಷ್ಟಕ್ಕೆ ಸುಮ್ಮನಾಗದೇ ನಮಗೆ ಇರಾನ್ ಬೆದರಿಕೆ ಒಡ್ಡಿತ್ತು. ಹೀಗಾಗಿ ದಾಳಿ ಮಾಡಬೇಕಾಯಿತು. ಯುದ್ಧ ಮುಂದುವರೆದರೇ ಅಗತ್ಯಬಿದ್ದರೆ ನಾವು ಇರಾನ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರನ್ನು ನಿಯೋಜಿಸುತ್ತೇವೆ ಎಂದರು.

ಇದು ಅಂತ್ಯವಿಲ್ಲದ ಯುದ್ಧವಲ್ಲ, ನಾವು ಶೀಘ್ರವೇ ಕೊನೆಗೊಳಿಸುತ್ತೇವೆ: ಅಮೆರಿಕ ರಕ್ಷಣಾ ಕಾರ್ಯದರ್ಶಿ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸೇನಾ ಉದ್ವಿಗ್ನತೆಯ ಮಧ್ಯೆ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್, ಇರಾನ್ ಇರಾಕ್ ಅಲ್ಲ, ಅಲ್ಲಿ ಯುದ್ಧ ದೀರ್ಘಕಾಲ ಮುಂದುವರಿಯಬಹುದು ಎಂದು ಹೇಳಿದ್ದಾರೆ. ಇರಾನ್ ಮೇಲೆ ಹೆಚ್ಚುತ್ತಿರುವ ದಾಳಿಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹಿಂದಿನ ಅಮೆರಿಕದ ದಾಳಿಗಳ ನಡುವಿನ ಹೋಲಿಕೆಗಳನ್ನು ತಿರಸ್ಕರಿಸಿದರು. ವಾಷಿಂಗ್ಟನ್ ಮತ್ತೊಂದು ಇರಾಕ್‌ನಂತಹ ಜೌಗು ಪ್ರದೇಶದಲ್ಲಿ ಸಿಲುಕಿಕೊಳ್ಳುವುದಿಲ್ಲ, ಬದಲಿಗೆ ಟೆಹ್ರಾನ್‌ನ ಮಿಲಿಟರಿ ಶಕ್ತಿ ಮತ್ತು ಪರಮಾಣು ಮಹತ್ವಾಕಾಂಕ್ಷೆಗಳನ್ನು ಹತ್ತಿಕ್ಕಲು ನಿರ್ಣಾಯಕ ಅಭಿಯಾನವನ್ನು ನಡೆಸುತ್ತಿದೆ ಎಂದರು.

'ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ': ಇಸ್ರೇಲ್ ಪ್ರಧಾನಿ ನೇತನ್ಯಾಹು!

ತಮ್ಮ 'ಶ್ರೇಷ್ಠ ಸ್ನೇಹಿತ' ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದ್ದು, ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯ ನಡುವೆ ಇಸ್ರೇಲ್ ಜೊತೆ ನಿಂತಿದ್ದಕ್ಕಾಗಿ ಅವರಿಗೆ ನಾನು ಧನ್ಯವಾದ ಹೇಳುತ್ತೇನೆ. ನಾನು ನಿನ್ನೆ ಅವರೊಂದಿಗೆ ದೀರ್ಘವಾಗಿ ಮಾತನಾಡಿದೆ. ಇಸ್ರೇಲ್‌ನೊಂದಿಗೆ ಅವರ ನಿಲುವು, ಸತ್ಯದ ಪರ ನಿಂತಿದ್ದಕ್ಕಾಗಿ ಮತ್ತು ಭಾರತದ ಜನರ ಅಗಾಧ ಸ್ನೇಹಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.