ಇರಾನ್ ಯಾವುದೇ ಷರತ್ತುಗಳಿಲ್ಲದೆ ಶರಣಾಗತಿ ಒಪ್ಪಿಕೊಂಡರೆ ಮಾತ್ರ ಯುದ್ಧ ಅಂತ್ಯ: ಡೊನಾಲ್ಡ್ ಟ್ರಂಪ್
ಇರಾನ್ ಶರಣಾದರೆ ಅಮರಿಕಾ ಮತ್ತು ಅದರ ಮಿತ್ರರಾಷ್ಟ್ರಗಳು ಇರಾನ್ ಅನ್ನು ವಿನಾಶದ ಅಂಚಿನಿಂದ ಮರಳಿ ತರುವ ಕೆಲಸ ಮಾಡಲಿವೆ. ಇರಾನ್ ಅನ್ನು ಆರ್ಥಿಕವಾಗಿ ಹಿಂದೆಂದಿಗಿಂತಲೂ ದೊಡ್ಡ, ಉತ್ತಮ ಮತ್ತು ಬಲಶಾಲಿಯಾಗಿ ಮಾಡಲಾಗುವುದು.

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರವಾಗುತ್ತಿರುವ ನಡುವೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದು, ಯುದ್ಧ ಅಂತ್ಯಗೊಳ್ಳಬೇಕಾದರೆ ಇರಾನ್ ಸಂಪೂರ್ಣವಾಗಿ ಶರಣಾಗತಿಯಾಗಬೇಕೆಂದು ಹೇಳಿದ್ದಾರೆ.
ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಗಂಭೀರ ಹಂತ ತಲುಪಿರುವ ನಡುವಲ್ಲೇ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ.
ಇರಾನ್ ಯಾವುದೇ ಷರತ್ತುಗಳಿಲ್ಲದೆ ಶರಣಾಗತಿ ಒಪ್ಪಿಕೊಂಡರೆ ಮಾತ್ರ ಯುದ್ಧ ಅಂತ್ಯಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇರಾನ್ ಶರಣಾದರೆ ಅಮರಿಕಾ ಮತ್ತು ಅದರ ಮಿತ್ರರಾಷ್ಟ್ರಗಳು ಇರಾನ್ ಅನ್ನು ವಿನಾಶದ ಅಂಚಿನಿಂದ ಮರಳಿ ತರುವ ಕೆಲಸ ಮಾಡಲಿವೆ. ಇರಾನ್ ಅನ್ನು ಆರ್ಥಿಕವಾಗಿ ಹಿಂದೆಂದಿಗಿಂತಲೂ ದೊಡ್ಡ, ಉತ್ತಮ ಮತ್ತು ಬಲಶಾಲಿಯಾಗಿ ಮಾಡಲಾಗುವುದು ಎಂದು ಟ್ರಂಪ್ ಹೇಳಿದ್ದಾರೆ.
ಇತ್ತೀಚೆಗೆ ಟೆಹ್ರಾನ್ ಸೇರಿ ಇರಾನ್‌ನ ಹಲವು ಪ್ರದೇಶಗಳಲ್ಲಿ ಭಾರೀ ಸ್ಫೋಟಗಳು ಸಂಭವಿಸಿದ್ದು, ಇಸ್ರೇಲ್ ನಡೆಸಿದ ವಾಯುದಾಳಿಗಳ ಬಳಿಕ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ.
ಇದರ ಪ್ರತಿಕ್ರಿಯೆಯಾಗಿ ಇರಾನ್ ಕೂಡ ಇಸ್ರೇಲ್ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿರುವುದಾಗಿ ವರದಿಯಾಗಿದೆ.
ಈ ಬೆಳವಣಿಗೆ ಹಿನ್ನೆಲೆಯಲ್ಲಿ ಅಮೆರಿಕಾ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದು, ಅಗತ್ಯವಿದ್ದರೆ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ವಾತಾವರಣ ಮತ್ತಷ್ಟು ಗಂಭೀರಗೊಂಡಿದ್ದು, ಪರಿಸ್ಥಿತಿ ವಿಸ್ತಾರವಾದರೆ ಪ್ರಾದೇಶಿಕ ಮಟ್ಟದ ದೊಡ್ಡ ಸಂಘರ್ಷಕ್ಕೆ ದಾರಿ ಮಾಡಿಕೊಡುವ ಸಾಧ್ಯತೆ ಇದೆ ಎಂದು ಜಾಗತಿಕ ಸಮುದಾಯ ಆತಂಕ ವ್ಯಕ್ತಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



