West Asia conflict: ಇರಾಕ್‌ನಲ್ಲಿ ಅಮೆರಿಕಾದ KC-135 ಇಂಧನ ವಿಮಾನ ಪತನ; ನಾಲ್ವರು ಸಿಬ್ಬಂದಿ ಸಾವು
ಪಶ್ಚಿಮ ಇರಾಕ್‌ನಲ್ಲಿ ಅಪಘಾತಕ್ಕೀಡಾದ ಯುಎಸ್ ಮಿಲಿಟರಿ ಕೆಸಿ -135 ಇಂಧನ ತುಂಬುವ ವಿಮಾನದಲ್ಲಿದ್ದ ಆರು ಸಿಬ್ಬಂದಿಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕನ್ ಮಿಲಿಟರಿ ಯುಎಸ್ ಸೆಂಟ್ರಲ್ ಕಮಾಂಡ್ ಘೋಷಿಸಿದೆ.

ವಾಷಿಂಗ್ಟನ್: ಇರಾನ್ ವಿರುದ್ಧ ನಡೆಯುತ್ತಿರುವ ಸೇನಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಅಮೆರಿಕದ ಇಂಧನ ತುಂಬುವ ವಿಮಾನ ಇರಾಕ್‌ನಲ್ಲಿ ಪತನಗೊಂಡಿದ್ದು, ನಾಲ್ವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಪಶ್ಚಿಮ ಇರಾಕ್‌ನಲ್ಲಿ ಅಪಘಾತಕ್ಕೀಡಾದ ಯುಎಸ್ ಮಿಲಿಟರಿ ಕೆಸಿ -135 ಇಂಧನ ತುಂಬುವ ವಿಮಾನದಲ್ಲಿದ್ದ ಆರು ಸಿಬ್ಬಂದಿಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕನ್ ಮಿಲಿಟರಿ ಯುಎಸ್ ಸೆಂಟ್ರಲ್ ಕಮಾಂಡ್ ಘೋಷಿಸಿದೆ.
ಸೆಂಟ್ರಲ್ ಕಮಾಂಡ್ ಮಾಹಿತಿ ಪ್ರಕಾರ, ಈ ಕಾರ್ಯಾಚರಣೆಯಲ್ಲಿ ಎರಡು ವಿಮಾನಗಳು ಭಾಗಿಯಾಗಿದ್ದು, ಒಂದು ವಿಮಾನ ಸುರಕ್ಷಿತವಾಗಿ ಇಳಿದಿದ್ದರೆ ಮತ್ತೊಂದು ಪಶ್ಚಿಮ ಇರಾಕ್‌ನಲ್ಲಿ ಪತನಗೊಂಡಿದೆ. ರಕ್ಷಣಾ ಕಾರ್ಯ ಮುಂದುವರಿದಂತೆ ವಿಮಾನದಲ್ಲಿದ್ದ ಆರು ಸಿಬ್ಬಂದಿಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ.
ಘಟನೆ ಕುರಿತು ತನಿಖೆ ಪ್ರಗತಿಯಲ್ಲಿದೆ. ಆದಾಗ್ಯೂ, ಯಾವುದೇ ವಿಪತ್ತು ಅಥವಾ ಬೆಂಕಿಯಿಂದ ವಿಮಾನ ಪತನಗೊಂಡಿಲ್ಲ ಎಂದು ಯುಎಸ್ ಸೆಂಟ್ರಲ್ ಕಮಾಂಡ್ ಹೇಳಿಕೆಯಲ್ಲಿ ತಿಳಿಸಿದೆ.
ಇರಾನ್ ವಿರುದ್ಧ ನಡೆಯುತ್ತಿರುವ ಯುದ್ಧ ಕಾರ್ಯಾಚರಣೆಗಳ ನಡುವೆ ಅಮೆರಿಕದ ನಾಲ್ಕನೇ ವಿಮಾನ ಪತನ ಘಟನೆ ಇದಾಗಿದೆ. ಕಳೆದ ವಾರ ಅಮೆರಿಕದ ಮೂರು ಯುದ್ಧವಿಮಾನಗಳು ತಪ್ಪಾಗಿ ಅರ್ಥೈಸಿ ಮಿತ್ರ ರಾಷ್ಟ್ರ ಕುವೈತ್ ಪಡೆಗಳು ನಡೆಸಿದ ಗುಂಡಿನ ದಾಳಿಯಿಂದ ಹಾನಿಗೊಳಗಾಗಿದ್ದವು.
ಈ ನಡುವೆ ಇರಾನ್ ಯುದ್ಧದಲ್ಲಿ ಇದುವರೆಗೆ ಏಳು ಅಮೆರಿಕನ್ ಸೈನಿಕರು ಸಾವನ್ನಪ್ಪಿದ್ದು, ಸುಮಾರು 140 ಮಂದಿ ಗಾಯಗೊಂಡಿದ್ದಾರೆ ಎಂದು ಪೆಂಟಗನ್ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



