ಟ್ರಂಪ್ ಎಚ್ಚರಿಕೆಗೆ ತಲೆಬಾಗದ ಇರಾನ್: ಸೌದಿ ನೆಲೆಯಲ್ಲಿ ಕ್ಷಿಪಣಿ ದಾಳಿ; ಅಮೆರಿಕಾದ 5 ಟ್ಯಾಂಕರ್ ವಿಮಾನಗಳಿಗೆ ಹಾನಿ..!
ಸೌದಿ ಅರೇಬಿಯಾದಲ್ಲಿರುವ ಪ್ರಿನ್ಸ್ ಸುಲ್ತಾನ್ ಏರ್‌ಬೇಸ್ ನೆಲದಲ್ಲಿದ್ದ ಅಮೆರಿಕದ ವಾಯುಪಡೆಯ 5 ಟ್ಯಾಂಕರ್ ವಿಮಾನಗಳು ಇರಾನ್ ನಡೆಸಿದ ಕ್ಷಿಪಣಿ ದಾಳಿಯಿಂದ ಹಾನಿಗೊಳಗಾಗಿವೆ ಎಂದು ತಿಳಿದುಬಂದಿದೆ.

ಮಧ್ಯಪೂರ್ವದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆಯೇ ಸೌದಿ ಅರೇಬಿಯಾದಲ್ಲಿರುವ ಅಮೆರಿಕದ ಸೈನಿಕ ನೆಲೆಯಲ್ಲಿ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು. ಈ ದಾಳಿಯಲ್ಲಿ ಅಮೆರಿಕ ವಾಯುಪಡೆಯ ಐದು ಇಂಧನ ಟ್ಯಾಂಕರ್ ವಿಮಾನಗಳಿಗೆ ಹಾನಿಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಅಮೆರಿಕದ ಇಬ್ಬರು ಅಧಿಕಾರಿಗಳ ಹೇಳಿಕೆಯನ್ನು ಉಲ್ಲೇಖಿಸಿ ದಿ ವಾಲ್ ಸ್ಟ್ರೀಟ್ ಜರ್ನಲ್ ಈ ಕುರಿತು ವರದಿ ಮಾಡಿದೆ.
ವರದಿ ಪ್ರಕಾರ, ಸೌದಿ ಅರೇಬಿಯಾದಲ್ಲಿರುವ ಪ್ರಿನ್ಸ್ ಸುಲ್ತಾನ್ ಏರ್‌ಬೇಸ್ ನೆಲದಲ್ಲಿದ್ದ ಅಮೆರಿಕದ ವಾಯುಪಡೆಯ 5 ಟ್ಯಾಂಕರ್ ವಿಮಾನಗಳು ಇರಾನ್ ನಡೆಸಿದ ಕ್ಷಿಪಣಿ ದಾಳಿಯಿಂದ ಹಾನಿಗೊಳಗಾಗಿವೆ ಎಂದು ತಿಳಿದುಬಂದಿದೆ.
ವಿಮಾನಗಳು ಸಂಪೂರ್ಣವಾಗಿ ನಾಶವಾಗಿಲ್ಲ ಎನ್ನಲಾಗುತ್ತಿದ್ದು, ಹಾನಿಗೊಳಗಾದ ವಿಮಾನಗಳ ದುರಸ್ತಿ ಕಾರ್ಯ ನಡೆಯುತ್ತಿದೆ ಎಂದು ವರದಿಘಳು ತಿಳಿಸಿವೆ.
ಏತನ್ಮಧ್ಯೆ ಇರಾಕ್‌ನ ಪಶ್ಚಿಮ ಭಾಗದಲ್ಲಿ ಅಮೆರಿಕದ ಸೈನಿಕ ರಿಫ್ಯೂಯಲಿಂಗ್ ವಿಮಾನ ಪತನಗೊಂಡು ಅದರಲ್ಲಿದ್ದ ಆರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಸೇನೆ ದೃಢಪಡಿಸಿದೆ.
ಅಮೆರಿಕದ KC-135 ರಿಫ್ಯೂಯಲಿಂಗ್ ವಿಮಾನ ಗುರುವಾರ ಪಶ್ಚಿಮ ಇರಾಕ್‌ನಲ್ಲಿ ಪತನಗೊಂಡಿದ್ದು, ಇದು ಶತ್ರು ನಡೆಸಿದ ದಾಳಿಯಲ್ಲ ಎಂದು ಸೇನೆ ಸ್ಪಷ್ಟಪಡಿಸಿದೆ.
ಪೆಂಟಗನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್, ಇರಾನ್ ವಿರುದ್ಧದ ಕಾರ್ಯಾಚರಣೆ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.
ಇದೇ ವೇಳೆ ಮಧ್ಯಪೂರ್ವದಲ್ಲಿ ಅಮೆರಿಕ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷ ದಿನೇದಿನೇ ತೀವ್ರಗೊಳ್ಳುತ್ತಿದೆ. ಇರಾನ್ ವಿರುದ್ಧ ನಡೆಯುತ್ತಿರುವ ಅಮೆರಿಕದ ಸೈನಿಕ ಕಾರ್ಯಾಚರಣೆಗಳ ಹಿನ್ನೆಲೆಯಲ್ಲಿ ಹಲವು ದಾಳಿಗಳು ಮತ್ತು ಪ್ರತಿದಾಳಿಗಳು ನಡೆಯುತ್ತಿವೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ಕಂಪ್ ಅವರು, ಇರಾನ್ ವಿರುದ್ಧ ಕಠಿಣ ಎಚ್ಚರಿಕೆ ನೀಡಿದ್ದರೂ, ಇತ್ತೀಚಿನ ದಾಳಿಯೊಂದಿಗೆ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ.
ಮಧ್ಯಪೂರ್ವದಲ್ಲಿ ಸಂಘರ್ಷ ಮುಂದುವರಿದರೆ ಇನ್ನಷ್ಟು ದಾಳಿಗಳು ಸಂಭವಿಸುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



