West Asia war: ಕುವೈತ್ ಪ್ರಮುಖ ತೈಲ ಶುದ್ಧೀಕರಣ ಘಟಕದ ಮೇಲೆ ಇರಾನ್ ಡ್ರೋನ್ ದಾಳಿ, ಭಾರೀ ಬೆಂಕಿ
ಕುವೈತ್ ಸರ್ಕಾರದ ಮಾಹಿತಿ ಪ್ರಕಾರ, ಇದೇ ಘಟಕದ ಮೇಲೆ ಗುರುವಾರವೂ ದಾಳಿ ನಡೆದಿದ್ದು, ಅದರಿಂದಲೂ ಬೆಂಕಿ ಕಾಣಿಸಿಕೊಂಡಿತ್ತು. ಶುಕ್ರವಾರ ಮತ್ತೊಮ್ಮೆ ದಾಳಿ ನಡೆದಿದ್ದು, ಇದರಿಂದ ಪರಿಸ್ಥಿತಿ ಮತ್ತಷ್ಟು ಗಂಭೀರಗೊಂಡಿದೆ ಎಂದು ತಿಳಿಸಿದೆ.

ಕುವೈತ್: ಮಧ್ಯಪ್ರಾಚ್ಯದಲ್ಲಿ ಯುದ್ಧ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ಕುವೈತ್‌ನ ಪ್ರಮುಖ ತೈಲ ಶುದ್ಧೀಕರಣ ಘಟಕವಾದ ಮಿನಾ ಅಲ್-ಅಹ್ಮದಿ ಘಟಕದ ಮೇಲೆ ಇರಾನ್ ಮತ್ತೆ ಡ್ರೋನ್ ದಾಳಿ ನಡೆಸಿದ್ದು, ಭಾರೀ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.
ಕುವೈತ್ ಸರ್ಕಾರದ ಮಾಹಿತಿ ಪ್ರಕಾರ, ಇದೇ ಘಟಕದ ಮೇಲೆ ಗುರುವಾರವೂ ದಾಳಿ ನಡೆದಿದ್ದು, ಅದರಿಂದಲೂ ಬೆಂಕಿ ಕಾಣಿಸಿಕೊಂಡಿತ್ತು. ಶುಕ್ರವಾರ ಮತ್ತೊಮ್ಮೆ ದಾಳಿ ನಡೆದಿದ್ದು, ಇದರಿಂದ ಪರಿಸ್ಥಿತಿ ಮತ್ತಷ್ಟು ಗಂಭೀರಗೊಂಡಿದೆ ಎಂದು ತಿಳಿಸಿದೆ.
ಅಗ್ನಿಶಾಮಕ ದಳಗಳು ಬೆಂಕಿಯನ್ನು ನಿಗ್ರಹಿಸಲು ಹರಸಾಹಸ ಪಡುತ್ತಿದ್ದು, ತಕ್ಷಣದ ಮಾಹಿತಿ ಪ್ರಕಾರ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ದಾಳಿ ಮುಸ್ಲಿಂ ಸಮುದಾಯದ ಪ್ರಮುಖ ಹಬ್ಬವಾದ Eid al-Fitr ಆಚರಣೆ ನಡೆಯುತ್ತಿದ್ದ ಸಮಯದಲ್ಲೇ ನಡೆದಿರುವುದು ಗಮನಾರ್ಹವಾಗಿದೆ. ಇದರಿಂದ ಗಲ್ಪ್ ಪ್ರದೇಶದ ಭದ್ರತಾ ಪರಿಸ್ಥಿತಿ ಬಗ್ಗೆ ಮತ್ತಷ್ಟು ಆತಂಕ ವ್ಯಕ್ತವಾಗಿದೆ.
ಇಸ್ರೇಲ್ ಇತ್ತೀಚೆಗೆ ಇರಾನ್‌ನ ದಕ್ಷಿಣ ಪಾರ್ಸ್ ನೈಸರ್ಗಿಕ ಅನಿಲ ಕ್ಷೇತ್ರದ ಮೇಲೆ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಇರಾನ್ ಗಲ್ಪ್ ಅರಬ್ ರಾಷ್ಟ್ರಗಳ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಪ್ರತಿದಾಳಿ ನಡೆಸುತ್ತಿದೆ. ಇದರ ಪರಿಣಾಮವಾಗಿ ಜಾಗತಿಕ ಇಂಧನ ಮಾರುಕಟ್ಟೆಯಲ್ಲೂ ಅಸ್ಥಿರತೆ ಹೆಚ್ಚಾಗಿದೆ.
ಈ ಘಟನೆಯು ಮಧ್ಯಪ್ರಾಚ್ಯದ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಮುಂದಿನ ದಿನಗಳಲ್ಲಿ ಇಂಧನ ಸರಬರಾಜು ಹಾಗೂ ತೈಲ ಬೆಲೆಗಳ ಮೇಲೆ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



