ಅಮೆರಿಕಾ ನಮ್ಮ ಮೇಲೆ ದಾಳಿ ಮಾಡಿದರೆ, ನಾವು ಭಾರತದ ಮೇಲೆ ದಾಳಿ ಮಾಡ್ತೇವೆ: ಪಾಕ್ ಮಾಜಿ ರಾಯಭಾರಿ ಅಬ್ದುಲ್ ಬಾಸಿತ್
ಯಾರಾದರೂ ನಮನ್ನು ಕೆಟ್ಟ ದಷ್ಟಿಯಿಂದ ನೋಡಿದರೆ ಪಾಕಿಸ್ತಾನಕ್ಕೆ ಭಾರತದ ಮೇಲೆ ಎಲ್ಲಿ ಬೇಕಾದರೂ ದಾಳಿ ಮಾಡುವುದನ್ನು ಬಿಟ್ಟು ಬೇರೆ ದಾರಿ ಇರುವುದಿಲ್ಲ. ನಾವು ಹಾಗೆ ಆಗಬಾರದು ಎಂದು ಬಯಸುತ್ತೇವೆ.

ನವದೆಹಲಿ: ಭಾರತದಲ್ಲಿನ ಪಾಕಿಸ್ತಾನದ ಮಾಜಿ ರಾಯಭಾರಿ ಅಬ್ದುಲ್ ಬಾಸಿತ್ ನೀಡಿರುವ ವಿವಾದಾತ್ಮಕ ಹೇಳಿಕೆ ಇದೀಗ ದೇಶೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.
ಅಮೆರಿಕಾ ಪಾಕಿಸ್ತಾನದ ಅಣು ಸ್ಥಾವರಗಳ ಮೇಲೆ ದಾಳಿ ನಡೆಸಿದರೆ, ಅದರ ಪ್ರತಿಯಾಗಿ ಭಾರತದಲ್ಲಿನ ಪ್ರಮುಖ ನಗರಗಳಾದ ದೆಹಲಿ ಮತ್ತು ಮುಂಬೈ ಮೇಲೆ ದಾಳಿ ನಡೆಸುವುದಾಗಿ ಅಬ್ದುಲ್ ಬಾಸಿತ್ ಅವರು ಹೇಳಿದ್ದಾರೆ.
ಚರ್ಚಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಯಾರಾದರೂ ನಮನ್ನು ಕೆಟ್ಟ ದಷ್ಟಿಯಿಂದ ನೋಡಿದರೆ ಪಾಕಿಸ್ತಾನಕ್ಕೆ ಭಾರತದ ಮೇಲೆ ಎಲ್ಲಿ ಬೇಕಾದರೂ ದಾಳಿ ಮಾಡುವುದನ್ನು ಬಿಟ್ಟು ಬೇರೆ ದಾರಿ ಇರುವುದಿಲ್ಲ. ನಾವು ಹಾಗೆ ಆಗಬಾರದು ಎಂದು ಬಯಸುತ್ತೇವೆ, ಭಾರತವೂ ಹಾಗೆ ಬಯಸುವುದಿಲ್ಲ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.
ಅಬ್ದುಲ್ ಬಾಸಿತ್ ಅವರು ಭಾರತವನ್ನು ಗುರಿಯಾಗಿಸುವ ಮಾತು ಹೇಳಿರುವುದಕ್ಕೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಸಿತ್ ಅವರು, 2014 ರಿಂದ 2017 ರವರೆಗೆ ನವದೆಹಲಿಯಲ್ಲಿ ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಭಾರತದೊಂದಿಗೆ ನೇರ ಸಂಪರ್ಕ ಸಾಧಿಸಿದ್ದರಿಂದ, ಅವರ ಹಿಂದಿನ ಪಾತ್ರವು ಪ್ರತಿಕ್ರಿಯೆಗೆ ಹೆಚ್ಚಿನ ಮಹತ್ವ ಇದೆ ಎಂದು ವ್ಯಾಖ್ಯಾನಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



