ಇರಾನ್ ಮೇಲಿನ ದಾಳಿ ಐದು ದಿನ ತಾತ್ಕಾಲಿಕ ಸ್ಥಗಿತ: ಶಾಂತಿ ಸ್ಥಾಪನೆಗಾಗಿ ಪಾಕಿಸ್ತಾನ, ಟರ್ಕಿ, ಈಜಿಪ್ಟ್ ಮಧ್ಯಸ್ಥಿಕೆ!
ಟರ್ಕಿ, ಈಜಿಪ್ಟ್ ಮತ್ತು ಪಾಕಿಸ್ತಾನ ಕಳೆದ ಎರಡು ದಿನಗಳಿಂದ US ಮತ್ತು ಇರಾನ್ ನಡುವೆ ಸಂದೇಶಗಳನ್ನು ರವಾನಿಸುತ್ತಿವೆ ಎಂಬ ಮೂಲಗಳನ್ನು ಉಲ್ಲೇಖಿಸಿ US ಸುದ್ದಿವಾಹಿನಿ Axios ವರದಿ ಮಾಡಿದೆ.

ವಾಷಿಂಗ್ಟನ್: ಐದು ದಿನಗಳ ಕಾಲ ಇರಾನ್ ಮೇಲಿನ ದಾಳಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವುದರಿಂದ ಜಗತ್ತಿಗೆ ಶಾಂತಿಯ ಹೊಸ ಭರವಸೆ ಸಿಕ್ಕಿದೆ.
ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ನಾಲ್ಕನೇ ವಾರಕ್ಕೆ ಪ್ರವೇಶಿಸಿರುವಂತೆ ಪಾಕಿಸ್ತಾನ, ಈಜಿಪ್ಟ್ ಮತ್ತು ಟರ್ಕಿಯು ಶಾಂತಿಗಾಗಿ ಮಧ್ಯಸ್ಥಿಕೆ ಪ್ರಯತ್ನದ ವರದಿಗಳ ನಡುವೆ ಈ ಬೆಳವಣಿಗೆಯಾಗಿದೆ. ಮತ್ತೊಂದೆಡೆ ಯುದ್ಧ ಪ್ರಾರಂಭಿಸಿದ ಅಮೆರಿಕ ನೇರವಾಗಿ ಮಾತನಾಡಬೇಕು ಎಂದು ಇರಾನ್ ಪಟ್ಟು ಹಿಡಿದಿದೆ.
ಟರ್ಕಿ, ಈಜಿಪ್ಟ್ ಮತ್ತು ಪಾಕಿಸ್ತಾನ ಕಳೆದ ಎರಡು ದಿನಗಳಿಂದ US ಮತ್ತು ಇರಾನ್ ನಡುವೆ ಸಂದೇಶಗಳನ್ನು ರವಾನಿಸುತ್ತಿವೆ ಎಂಬ ಮೂಲಗಳನ್ನು ಉಲ್ಲೇಖಿಸಿ US ಸುದ್ದಿವಾಹಿನಿ Axios ವರದಿ ಮಾಡಿದೆ.
ಮೂರು ದೇಶಗಳ ವಿದೇಶಾಂಗ ಸಚಿವರು ಶ್ವೇತಭವನದ ರಾಯಭಾರಿ ಸ್ಟೀವ್ ವಿಟ್‌ಕಾಫ್ ಮತ್ತು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ ಎಂದು ಆಕ್ಸಿಯೋಸ್ ವರದಿ ಮಾಡಿದೆ.
ಮಧ್ಯಸ್ಥಿಕೆ ಮುಂದುವರೆದಿದ್ದು, ಯುದ್ಧವನ್ನು ಕೊನೆಗೊಳಿಸುವ ಮತ್ತು ಎಲ್ಲಾ ಬಾಕಿ ಇರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿದೆ. ಶೀಘ್ರದಲ್ಲಿ ಉತ್ತರ ದೊರೆಯುವ ನಿರೀಕ್ಷೆಯಿದೆ ಎಂದು ಮೂಲಗಳು ಹೇಳಿವೆ.
ಈಜಿಪ್ಟ್‌ನ ವಿದೇಶಾಂಗ ಸಚಿವ ಬದರ್ ಅಬ್ದೆಲಟ್ಟಿ ಭಾನುವಾರ ಪಾಕಿಸ್ತಾನ, ಟರ್ಕಿ ಮತ್ತು ಕತಾರ್‌ನ ವಿದೇಶಾಂಗ ಸಚಿವರೊಂದಿಗೆ ಸಭೆ ನಡೆಸಿದ್ದಾರೆ ಎಂದು ಈಜಿಪ್ಟ್ ವಿದೇಶಾಂಗ ಸಚಿವಾಲಯ ತಿಳಿಸಿದೆ. ಐದು ದಿನಗಳ ಕಾಲ ಇರಾನ್ ಮೇಲಿನ ದಾಳಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ನಂತರ ಈ ಬೆಳವಣಿಗೆಯಾಗಿದೆ. ಆದಾಗ್ಯೂ ಇರಾನ್‌ನ ವಿದೇಶಾಂಗ ಸಚಿವಾಲಯವು ಅಂತಹ ಮಾತುಕತೆಗಳ ವರದಿಗಳನ್ನು ನಿರಾಕರಿಸಿದೆ,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



