ಸಿಬ್ಬಂದಿ ಕೊರತೆ ನಮ್ಮ ಸೇನೆಗೆ ದೊಡ್ಡ ಸವಾಲು: ಇಸ್ರೇಲ್ ರಕ್ಷಣಾ ಪಡೆಗಳ ಮುಖ್ಯಸ್ಥ ಹೀಗೆ ಹೇಳಿದ್ಯಾಕೆ?
ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಜಮೀರ್ ಅವರು ಈ ಹೇಳಿಕೆ ನೀಡಿದ್ದು, ಸೈನ್ಯದ ಸನ್ನದ್ಧತೆಯ ಬಗ್ಗೆಯೂ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಇಸ್ರೇಲ್‌ನ ಚಾನೆಲ್ 13 ನ್ಯೂಸ್ ಅನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.

ಟೆಲ್ ಅವಿವ್: ಹೆಚ್ಚುತ್ತಿರುವ ಕಾರ್ಯಾಚರಣೆಯ ಒತ್ತಡ ಮತ್ತು ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಇಸ್ರೇಲ್ ರಕ್ಷಣಾ ಪಡೆಗಳ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಇಯಾಲ್ ಜಮೀರ್ ಗುರುವಾರ(ಸ್ಥಳೀಯ ಸಮಯ) ಅವರು ಸೇನೆಯಲ್ಲಿ ಮಾನವಶಕ್ತಿಯ(ಸಿಬ್ಬಂದಿ) ಕೊರತೆ ಹೆಚ್ಚುತ್ತಿರುವ ಕಾರಣ ಇಸ್ರೇಲ್ ಮಿಲಿಟರಿ "ಸ್ವತಃ ಕುಸಿಯಬಹುದು" ಎಂದು ಎಚ್ಚರಿಸಿದ್ದಾರೆ.
ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಜಮೀರ್ ಅವರು ಈ ಹೇಳಿಕೆ ನೀಡಿದ್ದು, ಸೈನ್ಯದ ಸನ್ನದ್ಧತೆಯ ಬಗ್ಗೆಯೂ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಇಸ್ರೇಲ್‌ನ ಚಾನೆಲ್ 13 ನ್ಯೂಸ್ ಅನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.
"ನಾನು ನಿಮ್ಮ ಮುಂದೆ 10 ರೆಡ್ ಫ್ಲಾಗ್ ಗಳನ್ನು ಪ್ರಸ್ತಾಪಿಸುತ್ತಿದ್ದೇನೆ" ಎಂದು ಜಮೀರ್ ಅವರು ಇಸ್ರೇಲ್ ರಕ್ಷಣಾ ಸಚಿವರಿಗೆ ತಿಳಿಸಿದ್ದಾರೆ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.
ಕಡ್ಡಾಯ ಮಿಲಿಟರಿ ಸೇವೆಯ ವಿಸ್ತರಣೆ ಸೇರಿದಂತೆ ಶಾಸಕಾಂಗ ಕ್ರಮಗಳ ತುರ್ತು ಅಗತ್ಯವನ್ನು ಒತ್ತಿ ಹೇಳಿದ ಜಮೀರ್, ಐಡಿಎಫ್‌ಗೆ ಈಗ ಕಡ್ಡಾಯ ಕಾನೂನು, ಕರ್ತವ್ಯ ಮೀಸಲು ಕಾನೂನು ಮತ್ತು ಕಡ್ಡಾಯ ಸೇವೆಯನ್ನು ವಿಸ್ತರಿಸಲು ಕಾನೂನು ಅಗತ್ಯವಿದೆ" ಎಂದು ಹೇಳಿರುವುದಾಗಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.
ಇಂತಹ ಕ್ರಮಗಳನ್ನು ತೆಗೆದುಕೊಳ್ಳದೇ ಇದ್ದರೆ, ಮಿಲಿಟರಿ ಶೀಘ್ರದಲ್ಲೇ ನಿಯಮಿತ ಕಾರ್ಯಾಚರಣೆಗಳನ್ನು ನಡೆಸಲು ಮತ್ತು ಅದರ ಮೀಸಲು ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಹೆಣಗಾಡಬಹುದು ಎಂದು ಎಚ್ಚರಿಸಿದ್ದಾರೆ.
ಟೈಮ್ಸ್ ಆಫ್ ಇಸ್ರೇಲ್ ಪ್ರಕಾರ, ಜಮೀರ್ ಈ ವಿಷಯದ ಬಗ್ಗೆ ಎಚ್ಚರಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ಜನವರಿಯಲ್ಲಿ, ಅವರು ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಇತರ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು, ಸಿಬ್ಬಂದಿ ಕೊರತೆಯು ಶೀಘ್ರದಲ್ಲೇ ಸೇನೆಯ ಕಾರ್ಯಾಚರಣೆಯ ಸನ್ನದ್ಧತೆಯ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ಎಚ್ಚರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



