ಜಾಗತಿಕ ನಾಯಕರ ಸಭೆ ವೇಳೆ ಕಾಲು ಜಾರಿ ಬಿದ್ದ ಪಾಕಿಸ್ತಾನ ಉಪ ಪ್ರಧಾನಿ Ishaq Dar; ವಿಡಿಯೋ ವೈರಲ್!
ಅಮೆರಿಕ-ಇರಾನ್ ಯುದ್ಧದ ಮಧ್ಯಸ್ಥಿಕೆ ಕುರಿತು ಇಸ್ಲಾಮಾಬಾದ್‌ನಲ್ಲಿ ನಡೆದ ವಿದೇಶಾಂಗ ಸಚಿವರ ಸಭೆಯಲ್ಲಿ ಪಾಕಿಸ್ತಾನದ ಉಪ ಪ್ರಧಾನಿ ಇಷಾಕ್ ದಾರ್ ಜಾರಿ ಬಿದ್ದರು.

ಇಸ್ಲಾಮಾಬಾದ್: ಪಾಕಿಸ್ತಾನ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಈಜಿಪ್ಟ್ ವಿದೇಶಾಂಗ ಸಚಿವರನ್ನು ಸ್ವಾಗತಿಸುವಾಗ ಕಾಲು ಜಾರಿ ಬಿದ್ದಿರುವ ವಿಡಿಯೋ ವೈರಲ್ ಆಗಿದೆ.
ಅಮೆರಿಕ-ಇರಾನ್ ಯುದ್ಧದ ಮಧ್ಯಸ್ಥಿಕೆ ಕುರಿತು ಇಸ್ಲಾಮಾಬಾದ್‌ನಲ್ಲಿ ನಡೆದ ವಿದೇಶಾಂಗ ಸಚಿವರ ಸಭೆಯಲ್ಲಿ ಪಾಕಿಸ್ತಾನದ ಉಪ ಪ್ರಧಾನಿ ಇಷಾಕ್ ದಾರ್ ಜಾರಿ ಬಿದ್ದರು. ಈ ಸಭೆಯಲ್ಲಿ ಸೌದಿ ಅರೇಬಿಯಾ, ಈಜಿಪ್ಟ್, ಮತ್ತು ಟರ್ಕಿ ದೇಶಗಳ ಸಚಿವರು ಭಾಗವಹಿಸಿದ್ದರು.
ಅತ್ತ ಇಶಾಕ್ ಧಾರ್ ಕೆಳಗೆ ಬೀಳುತ್ತಿದ್ದಂತೆಯೇ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಮತ್ತು ಅಧಿಕಾರಿಗಳು ತಕ್ಷಣ ಅವರನ್ನು ಮೇಲಕ್ಕೆತ್ತಲು ಸಹಾಯ ಮಾಡಿದರು. ಅದೃಷ್ಟವಶಾತ್, ಅವರು ಬಿದ್ದಿದ್ದರಿಂದ ಯಾವುದೇ ಗಂಭೀರ ಗಾಯಗಳಾಗಿಲ್ಲ.
ಇರಾನ್-ಇಸ್ರೇಲ್-ಅಮೆರಿಕದ ನಡುವೆ ನಡೆಯುತ್ತಿರುವ ಉದ್ವಿಗ್ನತೆ ಕಡಿಮೆ ಮಾಡಲು ತಾವು ಮಧ್ಯಸ್ಥಿಕೆ ವಹಿಸುತ್ತೇವೆ ಎಂದು ಪಾಕಿಸ್ತಾನ ಮುಂದೆ ಬಂದಿದೆ. ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿ, ಇಶಾಕ್ ದಾರ್ ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ ಎಂದು ಸ್ಪಷ್ಟಪಡಿಸಿದೆ. ಅವರು ಪ್ರಸ್ತುತ ಈಜಿಪ್ಟ್, ಟರ್ಕಿ ಮತ್ತು ಸೌದಿ ಅರೇಬಿಯಾದ ನಾಯಕರೊಂದಿಗೆ ಪ್ರಮುಖ ಚರ್ಚೆಗಳನ್ನು ನಡೆಸುತ್ತಿದ್ದಾರೆ.
ಹಾರ್ಮುಜ್ ಜಲಸಂಧಿಯ ಮೂಲಕ ಪಾಕಿಸ್ತಾನ ಧ್ವಜ ಹೊಂದಿರುವ 20 ಹೆಚ್ಚುವರಿ ಹಡಗುಗಳಿಗೆ ಸಾಗಣೆಗೆ ಇರಾನ್ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದ್ದಾರೆ. ಒಪ್ಪಂದದ ಪ್ರಕಾರ, ಈಗ ಪ್ರತಿದಿನ ಎರಡು ಹಡಗುಗಳು ಈ ಮಾರ್ಗದಲ್ಲಿ ಸಾಗಲು ಸಾಧ್ಯವಾಗುತ್ತದೆ.
ಪಾಕ್ ಘೋಷಣೆ
ಭೀಕರ ಯುದ್ಧ ನಡೆಸುತ್ತಿರುವ ಇರಾನ್ ಮತ್ತು ಅಮೆರಿಕ ನಡುವೆ ಖುದ್ದು ನಾವೇ ನಿಂತು ಮಾತುಕತೆ ಆಯೋಜಿಸುತ್ತೇವೆ ಎಂದು ಮಧ್ಯಪ್ರಾಚ್ಯ ಸಮರಕ್ಕೆ ಸಂಧಾನಕಾರನಾಗಿ ಕೆಲಸ ಮಾಡುತ್ತಿರುವ ಪಾಕಿಸ್ತಾನ ಸರ್ಕಾರ ಭಾನುವಾರ ಘೋಷಿಸಿತ್ತು. ಸೌದಿ ಅರೇಬಿಯಾ, ಈಜಿಪ್ಟ್, ಮತ್ತು ಟರ್ಕಿ ದೇಶಗಳ ಜೊತೆ ಸಭೆ ನಡೆಸಿದ ಬಳಿಕ ಪಾಕಿಸ್ತಾನದಿಂದ ಈ ಘೋಷಣೆ ಹೊರಬಿದ್ದಿದೆ.
ಬಳಿಕ ಮಾತನಾಡಿದ ಪಾಕಿಸ್ತಾನದ ವಿದೇಶಾಂಗ ಸಚಿವ ಇಷಾಕ್ ದಾರ್, ಅಮೆರಿಕ ಮತ್ತು ಇರಾನ್ ನಡುವೆ ಪಾಕಿಸ್ತಾನವೇ ಸಂಧಾನ ಸಭೆ ಆಯೋಜಿಸುತ್ತದೆ. ಈ ಯುದ್ಧ ಯಾರಿಗೂ ಒಳಿತು ಮಾಡುವುದಿಲ್ಲ. ಇದು ಕೇವಲ ಸಾವು ಮತ್ತು ವಿನಾಶಕ್ಕೆ ಕಾರಣವಾಗುತ್ತದೆ ಎಂದು ನಾವು ಒಪ್ಪಿಕೊಂಡಿದ್ದೇವೆ.
ಈ ಸವಾಲಿನ ಸಮಯದಲ್ಲಿ ಮುಸ್ಲಿಂ ದೇಶಗಳ ಒಗ್ಗಟ್ಟು ಅತ್ಯಂತ ಮಹತ್ವದ್ದಾಗಿದೆ' ಎಂದರು. ಸೌದಿ, ಟರ್ಕಿ ಮತ್ತು ಈಜಿಪ್ಟ್ ಸಚಿವರೂ ತಮ್ಮ ಮಾತಿಗೆ ಒಪ್ಪಿರುವುದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



