ವಿದೇಶ

ಭಾರತದ ಮೋಸ್ಟ್ ವಾಂಟೆಂಡ್ ಉಗ್ರ: ಪಾಕಿಸ್ತಾನದಲ್ಲಿ JeM ಭಯೋತ್ಪಾದಕ ಮಸೂದ್ ಅಜರ್‌ನ ಸಹೋದರ ನಿಗೂಢ ಸಾವು!

ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಮುಖಂಡ ಮಸೂದ್ ಅಜರ್‌ನ ಹಿರಿಯ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ಪಾಕಿಸ್ತಾನದಲ್ಲಿ ಸಾವನ್ನಪ್ಪಿದ್ದಾನೆ. ಅವನ ಸಾವು ಇನ್ನೂ ನಿಗೂಢವಾಗಿಯೇ ಉಳಿದಿದೆ.

ಭಾರತದ ಮೋಸ್ಟ್ ವಾಂಟೆಂಡ್ ಉಗ್ರ: ಪಾಕಿಸ್ತಾನದಲ್ಲಿ JeM ಭಯೋತ್ಪಾದಕ ಮಸೂದ್ ಅಜರ್‌ನ ಸಹೋದರ ನಿಗೂಢ ಸಾವು!
ಮೊಹಮ್ಮದ್ ತಾಹಿರ್ ಅನ್ವರ್-ಮಸೂದ್ ಅಜರ್‌
Published On :

ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಮುಖಂಡ ಮಸೂದ್ ಅಜರ್‌ನ ಹಿರಿಯ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ಪಾಕಿಸ್ತಾನದಲ್ಲಿ ಸಾವನ್ನಪ್ಪಿದ್ದಾನೆ. ಅವನ ಸಾವು ಇನ್ನೂ ನಿಗೂಢವಾಗಿಯೇ ಉಳಿದಿದೆ. ತಾಹಿರ್ ಅನ್ವರ್ ನ ಸಾವನ್ನು ಜೈಶ್‌ನ ಅಧಿಕೃತ ಚಾನೆಲ್ ಮೂಲಕ ಬಹಿರಂಗಪಡಿಸಲಾಗಿದೆ.

ವರದಿಗಳ ಪ್ರಕಾರ, ತಾಹಿರ್ ಅನ್ವರ್ ಜೈಶ್-ಎ-ಮೊಹಮ್ಮದ್‌ನಲ್ಲಿ ಪ್ರಮುಖ ಪಾತ್ರ ವಹಿಸಿದ್ದನು. ದೀರ್ಘಕಾಲದಿಂದ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದು ಅದರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದನು. ಸಂಘಟನೆಯಲ್ಲಿ ಆತನ ಪಾತ್ರವನ್ನು ಮಹತ್ವದ್ದಾಗಿ ಪರಿಗಣಿಸಲಾಗಿದೆ ಎಂದು ಮೂಲಗಳು ಹೇಳುತ್ತವೆ.

ಜೈಶ್-ಎ-ಮೊಹಮ್ಮದ್ ಮತ್ತು ಮಸೂದ್ ಅಜರ್ ಭಾರತದಲ್ಲಿ ನಡೆದ ಹಲವಾರು ಪ್ರಮುಖ ಭಯೋತ್ಪಾದಕ ದಾಳಿಗಳಿಗೆ ಸಂಬಂಧ ಹೊಂದಿದ್ದಾರೆ ಎಂಬುದು ಗಮನಿಸಬೇಕಾದ ಸಂಗತಿ. ಈ ದಾಳಿಗಳು ಭದ್ರತೆ, ರಾಜಕೀಯ ಮತ್ತು ಭಾರತ-ಪಾಕಿಸ್ತಾನ ಸಂಬಂಧಗಳ ಮೇಲೆ ಆಳವಾದ ಪರಿಣಾಮ ಬೀರಿವೆ.

ಪ್ರಮುಖ ಭಯೋತ್ಪಾದಕ ಘಟನೆಗಳು ಈ ಕೆಳಗಿನಂತಿವೆ...

* ದೆಹಲಿಯ ಸಂಸತ್ತಿನ ಮೇಲಿನ ದಾಳಿ: 2001ರ ಡಿಸೆಂಬರ್ 13ರಂದು ದೆಹಲಿ ಸಂಸತ್ ಭವನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು.

* ಪಠಾಣ್‌ಕೋಟ್ ವಾಯುನೆಲೆಯ ದಾಳಿ: 2016ರ ಜನವರಿಯಲ್ಲಿ ಆರು ಭಯೋತ್ಪಾದಕರು ಪಂಜಾಬ್ ನ ಭಾರತೀಯ ವಾಯುಪಡೆಯ ಪಠಾಣ್‌ಕೋಟ್ ವಾಯುನೆಲೆಯ ಮೇಲೆ ದಾಳಿ ಮಾಡಿದರು.

* ಉರಿ ದಾಳಿ: 2016ರ ಸೆಪ್ಟೆಂಬರ್ ನಲ್ಲಿ ಜಮ್ಮು ಮತ್ತು ಕಾಶ್ಮೀರದ ಸೇನಾ ಶಿಬಿರದ ಮೇಲೆ ದಾಳಿ ಮಾಡಲಾಯಿತು. ಈ ದಾಳಿಯಲ್ಲಿ 19 ಸೈನಿಕರು ಹುತಾತ್ಮರಾದರು.

* ಪುಲ್ವಾಮಾ ದಾಳಿ: 2019ರ ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲೆ ಆತ್ಮಾಹುತಿ ದಾಳಿ ನಡೆಯಿತು. 40 ಸೈನಿಕರು ಹುತಾತ್ಮರಾದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.