ಪಾಕ್‌ನಲ್ಲಿ ಧುರಂಧರರ ಆರ್ಭಟ: ಮೊನ್ನೆ ಜೈಶ್ ಉಗ್ರ, ನಿನ್ನೆ ಹಿಜ್ಬುಲ್ ಟಾಪ್ ಕಮಾಂಡರ್‌ಗೆ ಗುಂಡಿಟ್ಟು ಹತ್ಯೆ!
ಮೊನ್ನೆಯಷ್ಟೇ ಭಾರತಕ್ಕೆ ಬೇಕಿದ್ದ ಜೈಶ್-ಎ-ಮೊಹಮ್ಮದ್ ನ ಉನ್ನತ ಭಯೋತ್ಪಾದಕ ಕಮಾಂಡರ್ ಮೌಲಾನಾ ಸಲ್ಮಾನ್ ಅಜರ್ ನನ್ನು ಹತ್ಯೆ ಮಾಡಲಾಗಿತ್ತು.

ಇಸ್ಲಾಮಾಬಾದ್: ಮೊನ್ನೆಯಷ್ಟೇ ಭಾರತಕ್ಕೆ ಬೇಕಿದ್ದ ಜೈಶ್-ಎ-ಮೊಹಮ್ಮದ್ ನ ಉನ್ನತ ಭಯೋತ್ಪಾದಕ ಕಮಾಂಡರ್ ಮೌಲಾನಾ ಸಲ್ಮಾನ್ ಅಜರ್ ನನ್ನು ಹತ್ಯೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ನಿನ್ನೆಯಷ್ಟೇ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಸಜ್ಜದ್ ಅಹ್ಮದ್ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ಇಸ್ಲಾಮಾಬಾದ್ ನಲ್ಲಿರುವ ಅವರ ಮನೆಯಲ್ಲಿ ಅವರ ಶವ ಪತ್ತೆಯಾಗಿದೆ. ಭಯೋತ್ಪಾದಕನ ನೆರೆಹೊರೆಯವರು ಸಜ್ಜದ್ ಅಹ್ಮದ್ ಫೋಟೋವನ್ನು ಹಂಚಿಕೊಂಡಿದ್ದು ಆತನ ಸಾವನ್ನು ದೃಢಪಡಿಸಿದ್ದಾರೆ ಎಂದು ವರದಿಯಾಗಿದೆ. ಅಪರಿಚಿತ ದಾಳಿಕೋರರು ಉಗ್ರನನ್ನು ಗುಂಡಿಕ್ಕಿ ಕೊಂದಿದ್ದಾರೆ. ಈ ಘಟನೆ ಈ ಪ್ರದೇಶದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ಸಜ್ಜದ್ ಅಹ್ಮದ್ ಕುಖ್ಯಾತ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರಾಗಿದ್ದು, ಪಾಕಿಸ್ತಾನದಲ್ಲಿ ಆತನ ಹತ್ಯೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



