ಇರಾನ್‌ನ ಪರಿಷ್ಕೃತ 14 ಅಂಶಗಳ ಪ್ರಸ್ತಾವನೆಯನ್ನು ಅಮೆರಿಕಕ್ಕೆ ಸಲ್ಲಿಸಿದ ಪಾಕಿಸ್ತಾನ; ಒಪ್ಪಿಕೊಳ್ಳುತ್ತಾರಾ ಟ್ರಂಪ್?
ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಶಾಂತಿ ಮಾತುಕತೆಗೆ ಮಧ್ಯಸ್ಥಿಕೆ ವಹಿಸಿರುವ ಪಾಕಿಸ್ತಾನವು ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಅಮೆರಿಕಕ್ಕೆ ಇರಾನ್‌ನ ಪರಿಷ್ಕೃತ 14 ಅಂಶಗಳ ಪ್ರಸ್ತಾವನೆಯನ್ನು ತಲುಪಿಸಿದೆ.

ಕರಾಚಿ: ಅಮೆರಿಕ-ಇರಾನ್ ಸಂಘರ್ಷಕ್ಕೆ ತಿಂಗಳುಗಳೇ ಕಳೆದರೂ, ಶಾಂತಿ ಮಾತುಕತೆ ಮಾತ್ರ ಇನ್ನೂ ಒಂದು ದಾರದಲ್ಲಿ ನೇತಾಡುತ್ತಿದೆ. ಇತ್ತೀಚಿನ ವಾರಗಳಲ್ಲಿ ಉಭಯ ದೇಶಗಳ ನಡುವೆ ಯುದ್ಧವನ್ನು ಕೊನೆಗೊಳಿಸಲು ಹಲವಾರು ಪ್ರಸ್ತಾಪಗಳನ್ನು ವಿನಿಮಯ ಮಾಡಿಕೊಳ್ಳಲಾಗಿದೆ. ಆದರೆ ಎರಡೂ ಕಡೆಯವರು ಇಲ್ಲಿಯವರೆಗೆ ಯಾವುದೇ ಒಪ್ಪಂದಕ್ಕೆ ಬರಲು ವಿಫಲರಾಗಿದ್ದಾರೆ.
ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಶಾಂತಿ ಮಾತುಕತೆಗೆ ಮಧ್ಯಸ್ಥಿಕೆ ವಹಿಸಿರುವ ಪಾಕಿಸ್ತಾನವು ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಅಮೆರಿಕಕ್ಕೆ ಇರಾನ್‌ನ ಪರಿಷ್ಕೃತ 14 ಅಂಶಗಳ ಪ್ರಸ್ತಾವನೆಯನ್ನು ತಲುಪಿಸಿದೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ಪ್ರಸ್ತಾವನೆಗಳನ್ನು ಒಪ್ಪಿಕೊಂಡು ಯುದ್ಧವನ್ನು ಅಂತ್ಯಗೊಳಿಸುತ್ತಾರೆ ಎಂದು ಪಾಕಿಸ್ತಾನ ವಿಶ್ವಾಸ ವ್ಯಕ್ತಪಡಿಸಿದೆ.
ಇಸ್ಲಾಮಾಬಾದ್ ಟೆಹ್ರಾನ್‌ನ ನವೀಕರಿಸಿದ 14 ಅಂಶಗಳ ಪ್ರಸ್ತಾವನೆಯನ್ನು ವಾಷಿಂಗ್ಟನ್‌ಗೆ ಬ್ಯಾಕ್‌ಚಾನೆಲ್‌ಗಳ ಮೂಲಕ ತಲುಪಿಸಿದೆ ಎಂದು ಪಾಕಿಸ್ತಾನದ ಮೂಲವೊಂದು ಸೋಮವಾರ ಸುದ್ದಿ ಸಂಸ್ಥೆ ರಾಯಿಟರ್ಸ್‌ಗೆ ತಿಳಿಸಿದೆ.
ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ಆರಂಭಿಸಿದ ಆರು ವಾರಗಳ ನಂತರ ಕದನ ವಿರಾಮ ಘೋಷಣೆಯಾಗಿದ್ದು, ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಆರಂಭವಾದ ಶಾಂತಿ ಮಾತುಕತೆ ಅರ್ಧಕ್ಕೆ ಮೊಟಕುಗೊಂಡಿದೆ.
ಏಪ್ರಿಲ್‌ನಿಂದ ದೊಡ್ಡ ಪ್ರಮಾಣದ ಯುದ್ಧಗಳು ಕಡಿಮೆಯಾಗಿದ್ದರೂ, ಡ್ರೋನ್ ದಾಳಿಗಳು, ಹಾರ್ಮುಜ್ ಜಲಸಂಧಿಯಲ್ಲಿ ನೌಕಾ ಮುಖಾಮುಖಿ ಮತ್ತು ಇರಾನ್‌ನ ಪರಮಾಣು ಕಾರ್ಯಕ್ರಮದ ವಿವಾದಗಳು ಪಶ್ಚಿಮ ಏಷ್ಯಾ ಸಂಘರ್ಷವನ್ನು ಹೆಚ್ಚಿಸುತ್ತಲೇ ಇರುವುದರಿಂದ ಕದನ ವಿರಾಮ ಅಸ್ಥಿರವಾಗಿದೆ.
ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಘೈ ಅವರು, ಪಾಕಿಸ್ತಾನದ ಮಧ್ಯಸ್ಥಿಕೆಯ ಮೂಲಕ ಟೆಹ್ರಾನ್‌ನ ನಿಲುವನ್ನು ಅಮೆರಿಕಕ್ಕೆ ತಲುಪಿಸಲಾಗಿದೆ ಎಂದು ದೃಢಪಡಿಸಿದ್ದಾರೆ. ಆದರೆ ಪರಿಷ್ಕೃತ ಪ್ರಸ್ತಾವನೆಯ ವಿವರಗಳನ್ನು ಬಹಿರಂಗಪಡಿಸಲು ಅವರು ನಿರಾಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



