ಅಮೆರಿಕ ಜೊತೆಗೆ ಹಲವು ವಿಷಯಗಳಲ್ಲಿ ಶಾಂತಿ ಮಾತುಕತೆ; ಆದರೆ...: ಇರಾನ್ ಹೇಳಿದ್ದೇನು?
ಫೆಬ್ರವರಿ 28 ರಂದು ಆರಂಭವಾದ ಯುದ್ಧವನ್ನು ಕೊನೆಗೊಳಿಸುವ ಒಪ್ಪಂದಕ್ಕಾಗಿ 14 ಅಂಶಗಳ ಒಪ್ಪಂದವನ್ನು ಅಂತಿಮಗೊಳಿಸುತ್ತಿದೆ ಎಂದು ಇರಾನ್ ಹೇಳಿದ ನಂತರ ಇಸ್ಮಾಯಿಲ್ ಬಕೈ ಈ ಹೇಳಿಕೆ ನೀಡಿದ್ದಾರೆ.

ಟೆಹರಾನ್: ಮಧ್ಯ ಪ್ರಾಚ್ಯದಲ್ಲಿ ಸಂಘರ್ಷವನ್ನು ಬಗೆಹರಿಸುವ ನಿಟ್ಟಿನಲ್ಲಿ ಅಮೆರಿಕ ಜೊತೆಗೆ ಅನೇಕ ವಿಚಾರಗಳ ಬಗ್ಗೆ ಮಾತುಕತೆ ನಡೆಯುತ್ತಿದೆ. ಆದರೆ, ಒಪ್ಪಂದ ಸದ್ಯದಲ್ಲೇ ಆಗುವುದಿಲ್ಲ ಎಂದು ಇರಾನ್ ಹೇಳಿದೆ.
ಚರ್ಚೆಯಾಗುತ್ತಿರುವ ಅನೇಕ ವಿಷಯಗಳ ಬಗ್ಗೆ ನಾವು ತೀರ್ಮಾನಕ್ಕೆ ಬಂದಿದ್ದೇವೆ ಎಂದು ಹೇಳುವುದು ಸರಿಯಾಗಿದೆ. ಆದರೆ ಇದರರ್ಥ ಒಪ್ಪಂದಕ್ಕೆ ಸಹಿ ಹಾಕುವುದು ಸನ್ನಿಹಿತವಾಗಿದೆ ಎಂದರ್ಥವಲ್ಲ. ಅಮೆರಿಕದ ಕ್ಷಣಕ್ಕೊಂದು ಬದಲಾವಣೆಗಳು ಒಪ್ಪಂದ ಇನ್ನೂ ಅಂತಿಮಗೊಳ್ಳದಿರಲು ಕಾರಣವಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಕೈ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಫೆಬ್ರವರಿ 28 ರಂದು ಆರಂಭವಾದ ಯುದ್ಧವನ್ನು ಕೊನೆಗೊಳಿಸುವ ಒಪ್ಪಂದಕ್ಕಾಗಿ 14 ಅಂಶಗಳ ಒಪ್ಪಂದವನ್ನು ಅಂತಿಮಗೊಳಿಸುತ್ತಿದೆ ಎಂದು ಇರಾನ್ ಹೇಳಿದ ನಂತರ ಇಸ್ಮಾಯಿಲ್ ಬಕೈ ಈ ಹೇಳಿಕೆ ನೀಡಿದ್ದಾರೆ.
ಇರಾನ್ ಜೊತೆಗಿನ ಯುದ್ಧವನ್ನು ಕೊನೆಗೊಳಿಸುವ ಶಾಂತಿ ಒಪ್ಪಂದ ಸೋಮವಾರ ಕಾರ್ಯರೂಪಕ್ಕೆ ಬರಬಹುದು ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಹೇಳಿದ್ದರು. ಲೆಬನಾನ್ ಸೇರಿದಂತೆ ಇರಾನ್ ನಾದ್ಯಂತ ಯುದ್ಧವನ್ನು ಕೊನೆಗೊಳಿಸುವತ್ತ ಒಪ್ಪಂದದ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ಇರಾನ್ ವಿದೇಶಾಂಗ ಸಚಿವರು ಹೇಳಿದ್ದಾರೆ.
ಇರಾನ್‌ನ ಪರಮಾಣು ಕಾರ್ಯಕ್ರಮದ ವಿವರಗಳನ್ನು ಸೇರಿಸಲಾಗಿಲ್ಲ. ಉಭಯ ದೇಶಗಳು ಒಪ್ಪಂದ ಒಪ್ಪಿಕೊಂಡ ನಂತರವೇ ಈ ವಿಷಯವನ್ನು ಚರ್ಚಿಸಲಾಗುವುದು ಎಂದು ಅವರು ಪುನರುಚ್ಚರಿಸಿದ್ದಾರೆ. ಏಪ್ರಿಲ್ 13 ರಿಂದ ಜಾರಿಯಲ್ಲಿರುವ ಇರಾನಿನ ಬಂದರುಗಳ ಮೇಲಿನ ಯುಎಸ್ ನೌಕಾ ದಿಗ್ಬಂಧನವನ್ನು ಕೊನೆಗೊಳಿಸಬೇಕು. ಇದೇ ವೇಳೆ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷಿತ ಸಾಗಣೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ" ಎಂದು ಅವರು ಹೇಳಿದರು.

ಹಾರ್ಮುಜ್ ಜಲಸಂಧಿ ಪುನಾರಂಭ, ಮುಕ್ತ ತೈಲ ಮಾರಾಟ, 60 ದಿನಗಳ ಯುದ್ಧ ವಿರಾಮ ವಿಸ್ತರಣೆ: ಅಮೆರಿಕ-ಇರಾನ್ ಒಪ್ಪಂದ
ಯುದ್ಧ ಪ್ರಾರಂಭವಾದಾಗಿನಿಂದ ಪ್ರಮುಖ ಜಾಗತಿಕ ಹಡಗು ಮಾರ್ಗವಾದ ಹಾರ್ಮುಜ್ ಮೂಲಕ ಸಂಚಾರವು ಇರಾನಿನ ನಿಯಂತ್ರಣದಲ್ಲಿದೆ. ಇರಾನ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ಟೋಲ್‌ಗಳನ್ನು ವಿಧಿಸುತ್ತಿಲ್ಲ, ಬದಲಿಗೆ "ಸಮುದ್ರ ಸೇವೆಗಳಿಗೆ" ಶುಲ್ಕವನ್ನು ಸಂಗ್ರಹಿಸುತ್ತಿದೆ ಎಂದು ಬಕೈ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


