ಆಸ್ಪತ್ರೆಗೆ ಭೇಟಿ ನೀಡಿ, ಫ್ಲೈದುಬೈ ಹೀರೋ ಸ್ಮಿತ್ ಮಚ್ಚಾರ್ ಹಣೆಗೆ ಮುತ್ತಿಟ್ಟ ದುಬೈ ಕ್ರೌನ್ ಪ್ರಿನ್ಸ್! ಹೇಳಿದ್ದೇನು?
ಕಳೆದ ಬುಧವಾರ ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ 'ಫ್ಲೈದುಬೈ' ವಿಮಾನ FZ1073ರ ಕಾಕ್‌ಪಿಟ್‌ನಲ್ಲಿ ಸಹ-ಪೈಲಟ್‌ನಿಂದ ಇರಿತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಚ್ಚಾರ್ ಅವರು ದುಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದುಬೈ: ದುಬೈ ಯುವರಾಜ ಹಾಗೂ ಯುಎಇ ಉಪ ಪ್ರಧಾನಿ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೂಮ್ ಅವರು ಆಸ್ಪತ್ರೆಗೆ ಭೇಟಿ ನೀಡಿ, 'ಫ್ಲೈದುಬೈ' (flydubai) ಪೈಲಟ್, ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ ಆರೋಗ್ಯ ವಿಚಾರಿಸಿದ್ದಾರೆ.
ಕಳೆದ ಬುಧವಾರ ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ 'ಫ್ಲೈದುಬೈ' ವಿಮಾನ FZ1073ರ ಕಾಕ್‌ಪಿಟ್‌ನಲ್ಲಿ ಸಹ-ಪೈಲಟ್‌ನಿಂದ ಇರಿತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಚ್ಚಾರ್ ಅವರು ದುಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಆಸ್ಪತ್ರೆಗೆ ಭೇಟಿ ನೀಡಿ, ಫ್ಲೈದುಬೈ ಹೀರೋ ಸ್ಮಿತ್ ಮಚ್ಚಾರ್ ಆರೋಗ್ಯ ವಿಚಾರಿಸಿದ ದುಬೈ ಕ್ರೌನ್ ಪ್ರಿನ್ಸ್, ಭಾರತೀಯ ಪೈಲಟ್ ಬಗ್ಗೆ "ಭಾರೀ ಮೆಚ್ಚುಗೆ ಮತ್ತು ಪ್ರಶಂಸೆ" ವ್ಯಕ್ತಪಡಿಸಿದ್ದಾರೆ.
"ನಮ್ಮಿಂದ ಹಾಗೂ ರಾಷ್ಟ್ರದ ನಾಯಕತ್ವದಿಂದ ಅವರಿಗೆ ಸಂಪೂರ್ಣ ಮೆಚ್ಚುಗೆ ಮತ್ತು ಪ್ರಶಂಸೆ ಸಲ್ಲುತ್ತದೆ. ಅವರು ನಮ್ಮ ತಂಡದ ಭಾಗವಾಗಿರುವುದಕ್ಕೆ... ನಮ್ಮ ರಾಷ್ಟ್ರದ ಕಥೆಯ ಭಾಗವಾಗಿರುವುದಕ್ಕೆ... ಹಾಗೂ ಯುಎಇ (UAE) ಪ್ರತಿನಿಧಿಸುವ ಮೌಲ್ಯಗಳ ಭಾಗವಾಗಿರುವುದಕ್ಕೆ ನಮಗೆ ಹೆಮ್ಮೆಯಿದೆ... ಇದು ಸಹಾನುಭೂತಿಯ ರಾಷ್ಟ್ರ... ಶಾಂತಿಯ ರಾಷ್ಟ್ರ... ಮತ್ತು ಜೀವಕ್ಕೆ ಬೆಲೆ ನೀಡುವ ರಾಷ್ಟ್ರ," ಎಂದು ಮಚ್ಚರ್ ಭೇಟಿ ಬಳಿಕ ಕ್ರೌನ್ ಪ್ರಿನ್ಸ್ 'ಎಕ್ಸ್' (X) ನಲ್ಲಿ ಬರೆದುಕೊಂಡಿದ್ದಾರೆ.
ಮಚ್ಚರ್ ಭೇಟಿಯ ಫೋಟೋಗಳನ್ನು ಹಂಚಿಕೊಂಡಿರುವ ಕ್ರೌನ್ ಪ್ರಿನ್ಸ್, ಮಚ್ಚಾರ್ ಅವರೊಂದಿಗೆ ಮಾತನಾಡುತ್ತಿರುವುದು ಮತ್ತು ಅವರನ್ನು ಅಪ್ಪಿಕೊಳ್ಳುತ್ತಿರುವುದು ಹಾಗೂ ಅವರ ಹಣೆಗೆ ಮುತ್ತಿಡುತ್ತಿರುವುದು ಕಂಡುಬಂದಿದೆ.
ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ‘ಫ್ಲೈದುಬೈ’ ವಿಮಾನದಲ್ಲಿ ಸಹ-ಪೈಲಟ್ ನಡೆಸಿದ ದಾಳಿಯ ಪ್ರಯತ್ನವನ್ನು ವಿಫಲಗೊಳಿಸುವ ಮೂಲಕ 180 ಜನರ ಪ್ರಾಣ ಉಳಿಸಿದ ಭಾರತದ ಧೈರ್ಯಶಾಲಿ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ ಬಗ್ಗೆ ಜಗತ್ತಿನಾದ್ಯಂತ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



