ಓಮನ್ ನಲ್ಲಿ ವಾಣಿಜ್ಯ ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ಸಾವು!
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಓಮನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಬುಧವಾರ ಮಾಹಿತಿ ಹಂಚಿಕೊಂಡಿದೆ.

ಮಸ್ಕತ್: ಓಮನ್ ನಲ್ಲಿ ಭಾರತಕ್ಕೆ ಪ್ರಯಾಣಿಸುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ಮತ್ತೆ ದಾಳಿ ನಡೆದಿದೆ. ಎಂವಿ ಕೇಪ್ ಡಾವೊ' (MV Cape Dao) ಎಂಬ ವಾಣಿಜ್ಯ ಹಡಗಿನ ಮೇಲಿನ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಮೃತಪಟ್ಟಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಓಮನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಬುಧವಾರ ಮಾಹಿತಿ ಹಂಚಿಕೊಂಡಿದೆ.
ಈ ದಾಳಿಯ ಕುರಿತು ನಿಗಾ ವಹಿಸುತ್ತಿದ್ದು, 19 ಭಾರತೀಯ ಪ್ರಜೆಗಳು ಸೇರಿದಂತೆ ಹಡಗಿನಲ್ಲಿದ್ದ ಸಿಬ್ಬಂದಿಯ ಸುರಕ್ಷತೆಯ ವಿಷಯದಲ್ಲಿ ಓಮನ್‌ನ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿರುವುದಾಗಿ ರಾಯಭಾರ ಕಚೇರಿ ಹೇಳಿದೆ.
ಈ ದಾಳಿಯಲ್ಲಿ ಒಬ್ಬ ಭಾರತೀಯ ಪ್ರಜೆ ಮೃತಪಟ್ಟಿರುವುದು ನಮಗೆ ತೀವ್ರ ದುಃಖವನ್ನು ತಂದಿದೆ. ಮೃತರ ಕುಟುಂಬಕ್ಕೆ ನಮ್ಮ ಸಂತಾಪಗಳು," ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.
ಹಡಗಿನ ಮೇಲೆ ದಾಳಿ ನಡೆಸಿದವರು ಯಾರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ತಾವು ಆರ್‌ಪಿಎಸ್‌ಎಲ್ (RPSL) ಜೊತೆ ಸಮನ್ವಯ ಸಾಧಿಸುತ್ತಿದ್ದು, ಮೃತರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ರಾಯಭಾರ ಕಚೇರಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



