ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ: ಪೊಲೀಸ್ ಚೆಕ್‌ಪೋಸ್ಟ್ ಬಳಿ ಆತ್ಮಾಹುತಿ ಬಾಂಬ್ ಸ್ಫೋಟ; ಇಬ್ಬರು ಅಧಿಕಾರಿ ಸೇರಿ 11 ಮಂದಿ ಸಾವು
ಉಗ್ರ ದಾಳಿಯಲ್ಲಿ ಇಬ್ಬರು ಅಧಿಕಾರಿಗಳು ಸೇರಿದಂತೆ ಕನಿಷ್ಠ 11 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಇಸ್ಲಾಮಾಬಾದ್: ವಾಯುವ್ಯ ಪಾಕಿಸ್ತಾನದಲ್ಲಿ ಶನಿವಾರ ಭೀಕರ ಭಯೋತ್ಪಾದಕ ದಾಳಿ ನಡೆದಿದ್ದು, ಪೊಲೀಸ್ ಚೆಕ್‌ಪೋಸ್ಟ್ ಬಳಿ ಆತ್ಮಹತ್ಯಾ ಬಾಂಬರ್ ಒಬ್ಬ ಸ್ಫೋಟಕ ತುಂಬಿದ ವಾಹನವನ್ನು ಸ್ಫೋಟಿಸಿಕೊಂಡಿದ್ದಾನೆ.
ಉಗ್ರ ದಾಳಿಯಲ್ಲಿ ಇಬ್ಬರು ಅಧಿಕಾರಿಗಳು ಸೇರಿದಂತೆ ಕನಿಷ್ಠ 11 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ಈ ದಾಳಿ ನಡೆದಿದೆ ಎಂದು ಪ್ರಾಂತ್ಯದ ತುರ್ತು ಸೇವಾ ವಿಭಾಗದ ವಕ್ತಾರ ಬಿಲಾಲ್ ಫೈಜಿ ಅವರು ತಿಳಿಸಿದ್ದಾರೆ.
ಮೃತರ ಪೈಕಿ ಅಬಕಾರಿ ಮತ್ತು ಸುಂಕ(ಕಸ್ಟಮ್ಸ್) ಇಲಾಖೆಯ ಇಬ್ಬರು ಅಧಿಕಾರಿಗಳೂ ಸೇರಿದ್ದಾರೆ. ದಾಳಿಯಲ್ಲಿ ಬಳಸಲಾದ ಸ್ಫೋಟಕಗಳ ಸ್ವರೂಪವನ್ನು ಪತ್ತೆಹಚ್ಚಲು ಪೊಲೀಸರು ಬಾಂಬ್ ನಿಷ್ಕ್ರಿಯ ದಳ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದೆ.
ಮೃತದೇಹಗಳನ್ನು ಮತ್ತು ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಗೊಂಡವರ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಅಸೋಸಿಯೇಟೆಡ್ ಪ್ರೆಸ್ ಪ್ರಕಾರ, ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ್ ಅಥವಾ ಟಿಟಿಪಿ ಎಂದು ಕರೆಯಲ್ಪಡುವ ಪಾಕಿಸ್ತಾನಿ ತಾಲಿಬಾನ್ ಈ ಭೀಕರ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



