Video: ಆಕಾಶದಲ್ಲೇ ಪೈಲಟ್‌ಗಳ ರಕ್ತಸಿಕ್ತ ಮಾರಮಾರಿ; ಇಸ್ರೇಲ್‌ಗೆ ತೆರಳುತ್ತಿದ್ದ ವಿಮಾನ ಸೌದಿಯಲ್ಲಿ ತುರ್ತು ಲ್ಯಾಂಡಿಂಗ್; ತಪ್ಪಿದ ದೊಡ್ಡ ದುರಂತ!
ವಿಮಾನ ಟೇಕಾಫ್ ಆದ ಸ್ವಲ್ಪ ಸಮಯದ ನಂತರ ಕಾಕ್‌ಪಿಟ್‌ನಲ್ಲಿ ಇಬ್ಬರು ಪೈಲಟ್ ಗಳ ನಡುವೆ ಜಗಳ ಪ್ರಾರಂಭವಾಗಿದೆ. ಜಗಳ ವಿಕೋಪಕ್ಕೆ ಹೋಗಿ ಓರ್ವ ಪೈಲಟ್ ವಿಮಾನ ಹಾರಾಟದ ಸಂದರ್ಭದಲ್ಲಿ ‘7500’ ಎಮರ್ಜೆನ್ಸಿ ಕೋಡ್ ಒತ್ತಿದ್ದಾರೆ.

ಟೆಲ್ ಅವಿವ್, ಇಸ್ರೇಲ್: ಯುನೈಟೆಡ್ ಅರಬ್ ಎಮಿರೇಟ್ಸ್‌ನ ದುಬೈನಿಂದ ಇಸ್ರೇಲ್‌ಗೆ ಪ್ರಯಾಣಿಸುತ್ತಿದ್ದ ವಾಣಿಜ್ಯ ವಿಮಾನ ಬುಧವಾರ ಸೌದಿ ಅರೇಬಿಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಇದು ಹೈಜಾಕ್ ಭೀತಿ ಹುಟ್ಟುಹಾಕಿತ್ತು ಮತ್ತು ಇಸ್ರೇಲ್ ಯುದ್ಧವಿಮಾನಗಳನ್ನು ಓಡಿಸಲು ಪ್ರೇರೇಪಿಸಿತು.
ವಿಮಾನದ ಇಬ್ಬರು ಪೈಲಟ್‌ಗಳ ನಡುವಿನ ಜಗಳದಿಂದ ಈ ಘಟನೆ ಸಂಭವಿಸಿದೆ ಮತ್ತು ವಿಮಾನದಲ್ಲಿದ್ದ ಎಲ್ಲ 180 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಭದ್ರತಾ ಅಧಿಕಾರಿಗಳನ್ನು ಉಲ್ಲೇಖಿಸಿ ಇಸ್ರೇಲಿ ಮಾಧ್ಯಮಗಳು ವರದಿ ಮಾಡಿವೆ.
ಈ ವಿಮಾನವು ರಾಜ್ಯದ ನಾಗರಿಕ ಮತ್ತು ಮಿಲಿಟರಿ ನೆಲೆಯಾದ ತಬುಕ್‌ನಲ್ಲಿ ಸುರಕ್ಷಿತವಾಗಿ ತುರ್ತು ಲ್ಯಾಂಡಿಂಗ್ ಮಾಡಿದೆ.
ಸಾರ್ವಜನಿಕವಾಗಿ ಲಭ್ಯವಿರುವ ವಿಮಾನ ಟ್ರ್ಯಾಕಿಂಗ್ ಮಾಹಿತಿಯ ಪ್ರಕಾರ, ಫ್ಲೈ ದುಬೈ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ತುರ್ತು ಎಚ್ಚರಿಕೆಯನ್ನು ರವಾನಿಸಿದೆ.
ವಿಮಾನ ಟೇಕಾಫ್ ಆದ ಸ್ವಲ್ಪ ಸಮಯದ ನಂತರ ಕಾಕ್‌ಪಿಟ್‌ನಲ್ಲಿ ಇಬ್ಬರು ಪೈಲಟ್ ಗಳ ನಡುವೆ ಜಗಳ ಪ್ರಾರಂಭವಾಗಿದೆ. ಜಗಳ ವಿಕೋಪಕ್ಕೆ ಹೋಗಿದ್ದು, ಇಬ್ಬರ ನಡುವೆ ರಕ್ತಸಿಕ್ತ ಮಾರಾಮಾರಿ ನಡೆದಿದೆ. ಈ ವೇಳೆ ಓರ್ವ ಪೈಲಟ್ ವಿಮಾನ ಹಾರಾಟದ ಸಂದರ್ಭದಲ್ಲಿ ‘7500’ ಎಮರ್ಜೆನ್ಸಿ ಕೋಡ್ ಒತ್ತಿದ್ದಾರೆ ಎಂದು ಪ್ರಾದೇಶಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘7500’ ಕೋಡ್ ಹೈಜಾಕ್ ಸೂಚಿಸುವ ಅಂತಾರಾಷ್ಟ್ರೀಯ ಎಚ್ಚರಿಕೆಯಾಗಿದೆ. ಬಳಿಕ ವಿಮಾನ ಸೌದಿ ಅರೇಬಿಯಾ ವಾಯುಪ್ರದೇಶದತ್ತ ಡೈವರ್ಟ್ ಮಾಡಲಾಗಿದ್ದು, ಅಂತಿಮವಾಗಿ ವಿಮಾನ ಸುರಕ್ಷಿತವಾಗಿ ಸೌದಿಯಲ್ಲಿ ಲ್ಯಾಂಡ್ ಆಗಿದೆ.
ಪೈಲಟ್ ಗಳ ಜಗಳಕ್ಕೆ ಕಾರಣವೇನೆಂದು ತಕ್ಷಣ ಸ್ಪಷ್ಟವಾಗಿ ತಿಳಿದು ಬಂದಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.
ವಿಮಾನವನ್ನು ಅದರ ನಿಗದಿತ ಮಾರ್ಗದಿಂದ ಬೇರೆಡೆಗೆ ತಿರುಗಿಸಿದ ನಂತರ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭದ್ರತಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆತರಲು ಇಸ್ರೇಲ್ ಕೆಲಸ ಮಾಡುತ್ತಿದೆ ಎಂದು ನೆತನ್ಯಾಹು ಅವರ ಕಚೇರಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


